
ರಾಜ್ಯ ರೆಡ್‌ಕ್ರಾಸ್ ಸಂಸ್ಥೆ ಸಭಾಪತಿ ಆಯ್ಕೆ
Friday, April 4, 2025
ಉಡುಪಿ: ಉಡುಪಿ ಜಿಲ್ಲಾ ರೆಡ್‌ಕ್ರಾಸ್ ಘಟಕದ ಸಭಾಪತಿಯಾಗಿದ್ದ ಬಸ್ರೂರು ರಾಜೀವ್ ಶೆಟ್ಟಿ ಕರ್ನಾಟಕ ರಾಜ್ಯ ರೆಡ್‌ಕ್ರಾಸ್ ಸಂಸ್ಥೆ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.
ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಚುನಾವಣೆ ನಡೆದಿದ್ದು, ರಾಜ್ಯ ಕರ್ನಾಟಕ ಸರಕಾರದ ಹಣಕಾಸು ಕಾರ್ಯದರ್ಶಿ ಡಾ. ವಿಶಾಲ್ ಆರ್. ಚುನಾವಣಾಧಿಕಾರಿಯಾಗಿದ್ದರು.
ಇದೇ ಸಂದರ್ಭದಲ್ಲಿ ಕೊಪ್ಪಳ ಘಟಕದ ಡಾ. ಶ್ರೀನಿವಾಸ ಹ್ಯಾಟಿ ಉಪಸಭಾಪತಿಯಾಗಿ ಆಯ್ಕೆಯಾದರು.
ರಾಜೀವ್ ಶೆಟ್ಟಿ ಈ ಹಿಂದೆ ಎರಡು ಬಾರಿ ರಾಜ್ಯ ಸಭಾಪತಿಯಾಗಿ ಕಾರ್ಯನಿರ್ವಹಿಸಿದ್ದರು. ಲಯನ್ಸ್‌ನ ಜಿಲ್ಲಾ ಗವರ್ನರ್‌ರಾಗಿ, ಕೇಂದ್ರ ಸರಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಒಂಬುಡ್ಸ್‌ಮೆನ್‌ರಾಗಿ ಸೇವೆ ಸಲ್ಲಿಸಿದ್ದಾರೆ. ವಿಕಲಚೇತನರ ರಾಷ್ಟ್ರೀಯ ಸಂಘಟನೆಯ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ.