ಮೈಸೂರು ನದಿಯಲ್ಲಿ ಕಾಲು ಜಾರಿ ಬಿದ್ದು ಬೆಳ್ತಂಗಡಿ ಯುವಕ ಸಾವು

ಮೈಸೂರು ನದಿಯಲ್ಲಿ ಕಾಲು ಜಾರಿ ಬಿದ್ದು ಬೆಳ್ತಂಗಡಿ ಯುವಕ ಸಾವು

ಉಜಿರೆ: ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನದಿಗೆ ಬಿದ್ದು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಯುವಕನೊಬ್ಬ ಸಾವನ್ನಪ್ಪಿದ ಘಟನೆ ನಡೆದಿದೆ.

ಕೋಳಿ ಸಾಕಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ ಮನ್ಸೂರ್ (19) ಎಂಬಾತ ತನ್ನ ಇಬ್ಬರು ಸಹೋದ್ಯೋಗಿಗಳ ಜೊತೆಗೆ ಏ.17 ರಂದು ರಾತ್ರಿ ಟಿ.ನರಸೀಪುರ ತಾಲೂಕಿನ ಬನ್ನೂರಿನಲ್ಲಿ ತಂಗಿದ್ದರು. ಏ.೧೮ ರಂದು ಬೆಳಗ್ಗೆ ಸ್ಥಳೀಯ ಕಾವೇರಿ ನದಿಯಲ್ಲಿ ವಾಹನ ತೊಳೆದು, ಸ್ನಾನ ಮಾಡಲು ತೆರಳಿದ ಸಂದರ್ಭದಲ್ಲಿ ಮನ್ಸೂರ್ ಎಂಬಾತ ಕಾಲು ಜಾರಿ ಗುಂಡಿಗೆ ಬಿದ್ದು ಸಾವನ್ನಪ್ಪಿದ್ದಾನೆ. 

ಸ್ಥಳಕ್ಕೆ ಬನ್ನೂರು ಪೊಲೀಸರು ತೆರಳಿದ್ದು ತನಿಖೆ ನಡೆಸುತ್ತಿದ್ದಾರೆ.

ಮೃತದೇಹವನ್ನು ಬನ್ನೂರು ತಾಲೂಕು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬಸ್ಥರಿಗೆ ಮೃತದೇಹವನ್ನು ಬಿಟ್ಟುಕೊಡಲಾಗುವುದು ಎಂದು ಬನ್ನೂರು ಪೊಲೀಸರು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article