ಅಪ್ರಾಪ್ತ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಅಪ್ರಾಪ್ತ ಕಾಲೇಜು ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ


ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಕಾಲೇಜಿನ 17ರ ಹರೆಯದ ವಿದ್ಯಾರ್ಥಿನಿಗೆ ಕಾರ್ಕಳ ನಿವಾಸಿ ಸೈಯ್ಯದ್ (24) ಎಂಬಾತ ಕಳೆದ ಕೆಲವು ದಿನಗಳಿಂದ ನಿರಂತರ ಮೊಬೈಲ್‌ಗೆ ಮೆಸೇಜ್ ಹಾಕುತ್ತಾ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಉಜಿರೆಯಲ್ಲಿ ಆರೋಪಿ ಸಯ್ಯದ್(24) ಎಂಬಾತನನ್ನು ಪತ್ತೆಹಚ್ಚಿ ಹಿಗ್ಗಾ ಮುಗ್ಗ ಥಳಿಸಿ, ಬಳಿಕ ಆತನನ್ನು ಬೆಳ್ತಂಗಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆತನ ಮೊಬೈಲ್ ಪರಿಶೀಲನೆ ನಡೆಸಿದಾಗ ಹಲವಾರು ಯುವತಿಯರ ಹಾಗೂ ಆತನ ಅಶ್ಲೀಲ ಫೋಟೋ, ವಿಡಿಯೋಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಅಪ್ರಾಪ್ತ ವಿದ್ಯಾರ್ಥಿನಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ನೀಡಿದ ದೂರಿನ ಮೇರೆಗೆ ಏ.26 ರಂದು ಆರೋಪಿ ಸಯ್ಯದ್(24)ನನ್ನು ಪೋಕ್ಸೋ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಮಂಗಳೂರು ಪೋಕ್ಸೋ ನ್ಯಾಯಾಲಯದ ನ್ಯಾಯಧೀಶರ ಮನೆಗೆ ರಾತ್ರಿ ಹಾಜರುಪಡಿಸಿದ್ದು, ನ್ಯಾಯಾಧೀಶರು ಆರೋಪಿಗೆ ಜಾಮೀನು ಮಂಜೂರು ಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article