
ಬಸ್ ಢಿಕ್ಕಿ ಹೊಡೆದು ಕಾರ್ಮಿಕ ಮೃತ್ಯು
Tuesday, May 20, 2025
ಬಂಟ್ವಾಳ: ಸೆಕ್ಯೂರಿಟಿ ಕೆಲಸ ಮುಗಿಸಿ ಕಂಪೆನಿ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ತಮಿಳುನಾಡು ಮೂಲದ ವ್ಯಕ್ತಿಯೋರ್ವರಿಗೆ ಹಿಂಬದಿಯಿಂದ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ಪಾಣೆಮಂಗಳೂರಿನ ಬೋಳಂಗಡಿ ಎಂಬಲ್ಲಿ ನಡೆದಿದೆ.
ತಮಿಳುನಾಡು ಮೂಲದ ಸುರರಾಮ್ ಬುಗ್ಗಪ್ಪ (50) ಮೃತಪಟ್ಟವರೆಂದು ಗುರುತಿಸಲಾಗಿದೆ.
ಇವರು ಕೆಎನ್ಆರ್ಸಿ ಕಂಪೆನಿಯ ಸೆಕ್ಯುರಿಟಿ ಕಾರ್ಮಿಕನಾಗಿದ್ದು, ರಾತ್ರಿ ಪಾಳಿಯ ಕೆಲಸ ಮುಗಿಸಿ ಕಂಪೆನಿಯತ್ತ ರಸ್ತೆಯ ಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ ಪಾಣೆಮಂಗಳೂರು ಸಮೀಪದ ಬೋಳಂಗಡಿ ಎಂಬಲ್ಲಿ ಬೆಂಗಳೂರಿನಿಂದ ಮಂಗಳೂರಿನತ್ತ ಬರುತ್ತಿದ್ದ ಖಾಸಗಿ ಬಸ್ ಹಿಂಬದಿಯಿಂದ ಢಿಕ್ಕಿ ಹೊಡೆದು ಬಳಿಕ ಬಸ್ನ್ನು ನಿಲ್ಲಿಸದೆ ಪರಾರಿಯಾಗಿದ್ದ. ಗಾಯಾಳು ಕಾರ್ಮಿಕನನ್ನುಕೂಡಲೇ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆಯಾದರೂ ಗಂಭೀರವಾಗಿಗಾಯಗೊಂಡಿದ್ದ ಸುರರಾಮ್ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಪರಾರಿಯಾಗಿದ್ದ ಎಸ್ಆರ್ಎಸ್ ಕಂಪೆನಿಗೆ ಸೇರಿದ ಬಸ್ನ್ನು ಬಂಟ್ವಾಳ ಟ್ರಾಫಿಕ್ ಪೊಲೀಸರು ಪತ್ತೆ ಹಚ್ಚಿ ವಶಪಡಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.