ಸುಹಾಸ್ ಶೆಟ್ಟಿ ಹತ್ಯೆ ಖಂಡನೀಯ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಮೋಹನ್ ಗೌಡ

ಸುಹಾಸ್ ಶೆಟ್ಟಿ ಹತ್ಯೆ ಖಂಡನೀಯ, ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ಮೋಹನ್ ಗೌಡ


ಬಂಟ್ವಾಳ: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಇಸ್ಲಾಮಿಕ್ ಜಿಹಾದಿಗಳು ಸಾರ್ವಜನಿಕವಾಗಿ ಬರ್ಬರವಾಗಿ ಹತ್ಯೆಗೈದಿರುವ ಹೇಯ ಕೃತ್ಯವನ್ನು ಹಿಂದೂ ಜನಜಾಗೃತಿ ಸಮಿತಿಯ ವಕ್ತಾರ ಮೋಹನ್ ಗೌಡ ಅವರು ಕಟು ಶಬ್ದಗಳಿಂದ ಖಂಡಿಸಿದ್ದಾರೆ.

ಪ್ರವೀಣ್ ನೆಟ್ಟಾರುರವರ ಹತ್ಯೆಯ ನಂತರ ಹಿಂದೂ ಕಾರ್ಯಕರ್ತರ ಹತ್ಯೆ ಮರುಕಳಿಸುತ್ತಿರುವುದು ಕಾಂಗ್ರೆಸ್ ಸರಕಾರದ ಮುಸಲ್ಮಾನರ ಓಲೈಕೆ ರಾಜಕಾರಣದಿಂದಾಗಿ ಹಿಂದುಗಳಿಗೆ ರಕ್ಷಣೆಯಿಲ್ಲದಂತಾಗಿದೆ ಎಂದು ಅವರು ಆಕ್ರೋಶವ್ಯಕ್ತಪಡಿಸಿದ್ದಾರೆ.

ದಂಗೆ, ಬರ್ಬರ ಹತ್ಯೆಯಂತಹ ಗಂಭೀರ ಪ್ರಕರಣಗಳಲ್ಲಿ ಭಾಗಿಯಾದಂತಹ ಇಸ್ಲಾಮಿಕ್ ಜಿಹಾದಿಗಳ ಮೇಲಿನ ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ವಾಪಸ್ ಪಡೆದುಕೊಂಡಿರುವುದು, ರಾಜ್ಯದಲ್ಲಿ ಜಿಹಾದಿಗಳಿಗೆ ಇಂತಹ ಕುಕೃತ್ಯವನ್ನು ಮುಂದುವರಿಸಲು ನೀಡಿದ ಕುಮುಕ್ಕಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುಹಾಸ್ ಶೆಟ್ಟಿ ಅವರಿಗೆ ಜಿಹಾದಿಗಳು ಏ.30 ರಂದು ಜೀವ ಬೆದರಿಕೆಯನ್ನು ಹಾಕಿ ಹತ್ಯೆ ಮಾಡುವುದಾಗಿ ಎಂದು ಹೇಳಿದ ನಂತರವು ಅವರಿಗೆ ಪೊಲೀಸ್ ಇಲಾಖೆ ರಕ್ಷಣೆ ನೀಡದಿರುವುದು ಅನುಮಾನಕ್ಕೆಡೆ ಮಾಡಿದ್ದು, ಸುಹಾಸ್ ಹತ್ಯೆಯ ಇಸ್ಲಾಮಿಕ್ ಜಿಹಾದ್‌ಗಳು ಮಾಡಿರುವ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಇಸ್ಲಾಮಿಕ್ ಜಿಹಾದ್‌ಗಳು ರಾಜಾರೋಷವಾಗಿ ಹಿಂದು ನಾಯಕರನ್ನು ಹತ್ಯೆ ಮಾಡುತ್ತಿದ್ದು, ಮತಾಂಧರಿಗೆ ಕಾನೂನಿನ ಭಯವೇ ಇಲ್ಲದಂತಾಗಿದೆ. ಹಾಗಾಗಿ ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಈ ಕೃತ್ಯದಲ್ಲಿ ಭಾಗಿಯಾದ ಅಪರಾಧಿಗಳಿಗೆ, ಮತ್ತು ಅವರಿಗೆ ಸಹಕರಿಸಿರುವವರನ್ನು ಮಾತ್ರವಲ್ಲ ಕುಮ್ಮಕ್ಕು ನೀಡಿದವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article