
ಮರದ ದಿಮ್ಮಿ ಅಕ್ರಮ ಸಾಗಾಟ
Friday, May 16, 2025
ಬಂಟ್ವಾಳ: ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರದ ದಿಮ್ಮಿಯನ್ನು ಸಾಗಾಟ ಮಾಡುತ್ತಿರುವುದನ್ನು ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ಮಂಗಳೂರಿನ ವೇಲೆನ್ಸಿಯಾ ಬಳಿ ಪತ್ತೆ ಹಚ್ಚಿದ್ದಾರೆ.
ವಾಹನ ಚಾಲಕ,ಕಾವೂರು ನಿವಾಸಿ ಕೃಷ್ಣ ಎಂಬವರ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿಯವರು ತನಿಖೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಲಾಗಿದೆ. ವಶಪಡಿಸಿಕೊಂಡ ಸೊತ್ತು ಮತ್ತು ವಾಹನದ ಮೌಲ್ಯ 5 ಲಕ್ಷ ರೂ.ಎಂದು ಅಂದಾಜಿಸಲಾಗಿದೆ.
ಮಂಗಳೂರು ಅರಣ್ಯ ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಕಾಂತ್ ಖಣದಾಳೆ ನೇತೃತ್ವದಲ್ಲಿ ವಲಯ ಅರಣ್ಯಾಧಿಕಾರಿ ಕುಮಾರ್ ಸ್ವಾಮಿ, ಉಪ ವಲಯ ಅರಣ್ಯಾಧಿಕಾರಿ ಪ್ರಶಾಂತ ಪೂಜಾರಿ, ಅಶ್ವಿಥ್ ಗಟ್ಟಿ,ವಿನಯ ಕುಮಾರ್, ವಾಹನ ಚಾಲಕ ಜಯಪ್ರಕಾಶ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.