ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎನ್‌ಐಎಗೆ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎನ್‌ಐಎಗೆ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ


ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ., ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನ ಸಭಾ ವಿಪಕ್ಷ ನಾಯಕ ಆರ್. ಅಶೋಕ್, ಉಪನಾಯಕ ಬೆಲ್ಲದ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ನೊಯೋಗದ ನೇತೃತ್ವವನ್ನು ವಹಿಸಿದ್ದರು.


ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಹರೀಶ್ ಪೂಂಜಾ,ಭಾಗಿರಥಿ ಮುರುಳ್ಯ, ಡಾ. ವೈ. ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ವೇದವ್ಯಾಸ ಕಾಮತ್, ಉಡುಪಿ ಜಿಲ್ಲೆಯ ಶಾಸಕರಾದ ಸುನೀಲ್ ಕುಮಾರ್, ಯಶ್ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಕಿರಣ್ ಹೆಗ್ಡೆ, ಗುರುರಾಜ್ ಗಂಟಿಹೊಳೆ, ಎಂಎಲ್‌ಸಿಗಳಾದ ರವಿಕುಮಾರ್, ಪ್ರತಾಪ ಸಿಂಹನಾಯಕ್ ಬೆಳ್ತಂಗಡಿ, ಕಾವಳಮೂಡೂರು ಗ್ರಾ.ಪಂ. ಅಧ್ಯಕ್ಷ ಅಜಿತ್ ಶೆಟ್ಟಿ, ಕೊಲೆಗೀಡಾದ ಸುಹಾಸ್ ಶೆಟ್ಟಿ ಹೆತ್ತವರು ಹಾಗೂ ಮಾವ ರಾಜೇಶ್ ಭಂಡಾರಿ ಮೊದಲಾದವರಿದ್ದರು.

ಗುರುವಾರ ಸಂಸದರು ಹಾಗೂ ಶಾಸಕರ ನಿಯೋಗ ಮಂಗಳೂರು ಪೊಲೀಸ್ ಕಮಿಷನರ್ ಅರ್ಗವಾಲ್ ಅವರನ್ನು ಭೇಟಿ ಸುಹಾಸ್ ಕೊಲೆ ಹಿಂದಿರುವ ಕೆಲವೊಂದು ಅನುಮಾನಗಳ ಬಗ್ಗೆ ಗಮನಕ್ಕೆ ತಂದು ಸೂಕ್ತ ಕ್ರಮಕ್ಕೆ ಒತ್ತಾಯಿಸಿತ್ತು.

ನಡ್ಡಾ ಭೇಟಿ:

ಈ ನಡುವೆ ಬಿಜೆಪಿ ರಾಷ್ಟ್ರೀಯಾಧ್ಯಕ್ಷ, ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಮೇ.11 ರಂದು ಸುಹಾಸ್ ಶೆಟ್ಡಿ ನಿವಾಸಕ್ಕಾಗಮಿಸಿ ಹೆತ್ತವರಿಗೆ ಸಾಂತ್ವನ ಹೇಳಲಿದ್ದಾರೆ.

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿ ಇದುವರೆಗೆ 8 ಮಂದಿ ಹಂತಕರನ್ನು ಬಂಧಿಸಲಾಗಿದ್ದು, ಇನ್ನಷ್ಟು ಮಂದಿ ಈ ಕೃತ್ಯ ಪ್ರತ್ಯಕ್ಷ ಮತ್ತು ಮರೋಕ್ಷವಾಗಿ ಶಾಮೀಲಾಗಿದ್ದಾರೆಂಬ ಹಿನ್ನಲೆಯಲ್ಲಿ ಮತ್ತು ವಿದೇಶದಿಂದಲು 50 ಲಕ್ಷಕ್ಕೂ ಹೆಚ್ಚು ಹಣ ಹರಿದುಬಂದಿದೆ ಎಂಬ ಆರೋಪವಿರುವುದರಿಂದ ಪ್ರಕರಣದ ತನಿಖೆಯನ್ನು ಎನ್‌ಐಎಯಿಂದ ತನಿಖೆ ನಡೆಸಬೇಕೆಂದು ಸುಹಾಸ್ ಹೆತ್ತವರು ಹಾಗೂ ಕುಟುಂಬಸ್ಥರು ಒತ್ತಾಯಿಸುತ್ತಲೇ ಇದ್ದು ಕರ್ನಾಟಕ ಸರಕಾರ ಪ್ರಕರಣವನ್ನು ಪೊಲೀಸರಿಂದಲೇ ತನಿಖೆ ನಡೆಸಲು ಹಠಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಈ ಕೃತ್ಯದ ತನಿಖೆಯನ್ನು ಎನ್‌ಐಎಗೆ ಒಪ್ಪಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ಮೂಲಕ ಒತ್ತಾಯಿಸಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article