
ಚರಂಡಿಗೆ ವಾಲಿದ ಬಸ್
Monday, May 26, 2025
ಬಂಟ್ವಾಳ: ರಾ.ಹೆ.75ರ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಯಲ್ಲಿ ವಾಲಿ ನಿಂತ ಘಟನೆ ಸೋಮವಾರ ನಡೆದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಪುತ್ತೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸು ಕುದ್ರೆಬೆಟ್ಟು ತಲುಪುತ್ತಿದ್ದಂತೆ ಕಾಂಕ್ರೀಟ್ ಚರಂಡಿಗೆ ಬಿದ್ದಿದ್ದು, ಮಳೆಯ ರಭಸಕ್ಕೆ ಬ್ರೇಕ್ ಸಿಗದೆ ಚಾಲಕನ ನಿಯಂತ್ರಣ ಕಳೆದುಕೊಂಡು ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಘಟನೆಯಲ್ಲಿ ಬಸ್ಸಿಗೆ ಹಾನಿಯಾಗಿದ್ದು, ಪ್ರಯಾಣಿಕರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.