ಬಂಟ್ವಾಳ ತಾಲೂಕು ಖಜಾನೆಯ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಬಂಟ್ವಾಳ ತಾಲೂಕು ಖಜಾನೆಯ ಇಬ್ಬರು ಸಿಬ್ಬಂದಿ ಲೋಕಾಯುಕ್ತ ಬಲೆಗೆ


ಬಂಟ್ವಾಳ: ತಾಲೂಕಿನ ಆಡಳಿತ ಸೌಧದಲ್ಲಿರುವ ಖಜಾನಾ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ಇಬ್ಬರು ಸಿಬ್ಬಂದಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಪ್ರಥಮ ದರ್ಜೆ ಸಹಾಯಕ ಬಸವೇಗೌಡ ಅವರು ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದಿರುವುದಾಗಿ ಲೋಕಾಯುಕ್ತ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತ್‌ ಒಂದರಲ್ಲಿ ಕಾರ್ಯದರ್ಶಿಯಾಗಿ ನಿವೃತ್ತಿ ಹೊಂದಿದ ವ್ಯಕ್ತಿಯೊಬ್ಬರು ಜೂನ್ 2024ರಂದು ಮರಣ ಹೊಂದಿರುತ್ತಾರೆ. ಇವರ ಪತ್ನಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಬಳಿ ಅವರ ಗಂಡನ ಮರಣ ಉಪದಾನದ ಬಗ್ಗೆ ಎರಡು ಬಾರಿ ಹೋಗಿ ವಿಚಾರಿಸಿದರೂ ಕೆಲಸ ಆಗಿಲ್ಲ. ಯಾಕೆ ಎಂದು ಕೇಳಿದಾಗ ಉಪದಾನವನ್ನು ಜಮೆ ಮಾಡಿದ್ದಕ್ಕೆ ಪ್ರತಿಫಲವಾಗಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ರೂ 5000 ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೆ ಗೌಡ ಬಿ.ಎನ್. ರೂ 5000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದಾಗಿ ಆಪಾದಿಸಲಾಗಿದ್ದು, ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೊಲೀಸ್‌ ಠಾಣೆಯಲ್ಲಿ ಬಂಟ್ವಾಳ ತಾಲೂಕು ಖಜಾನೆಯ ಮುಖ್ಯ ಲೆಕ್ಕಿಗ ಭಾಸ್ಕರ್ ಹಾಗೂ ಬಂಟ್ವಾಳ ಖಜಾನೆಯ ಎಫ್.ಡಿ.ಎ ಬಸವೇಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಬುಧವಾರ ರೆಡ್ ಹ್ಯಾಂಡ್ ಆಗಿ ಇಬ್ಬರೂ ಸಿಕ್ಕಿಬಿದ್ದರು. ಪ್ರಭಾರ ಪೊಲೀಸ್ ಅಧೀಕ್ಷಕ ಕುಮಾರಚಂದ್ರ, ಮಾರ್ಗದರ್ಶನದಲ್ಲಿ, ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್‌ ಉಪಾಧೀಕ್ಷರಾದ ಡಾ. ಗಾನ ಪಿ ಕುಮಾ‌ರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕರಾದ ಭಾರತಿ ಜಿ, ಚಂದ್ರಶೇಖರ್ ಕೆ.ಎನ್. ರವರು ಸಿಬ್ಬಂದಿಗಳ ಜೊತೆ ಟ್ರ್ಯಾಪ್ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article