ಭಾರತೀಯ ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಭಾರತೀಯ ಸೈನಿಕರಿಗೆ ಅಭಿನಂದನೆ ಹೇಳಿದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ

ಕುಂದಾಪುರ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮುಗ್ಧ ಪ್ರಾವಾಸಾರ್ಥಿಗಳ ಮೇಲೆ ನಡೆದ ಕ್ರೂರ ದಾಳಿಗೆ, ವಿಶ್ವವೇ ಮೆಚ್ಚುವ ರೀತಿಯಲ್ಲಿ ಪ್ರತಿಕಾರ ತೀರಿಸಿಕೊಂಡಿರುವ ಭಾರತದ ಹೆಮ್ಮೆಯ ಸೈನ್ಯದ ಸೈನಿಕರಿಗೆ ಅಭಿನಂದನೆ ಸಲ್ಲಿಸುವುದಾಗಿ ಬೈಂದೂರು ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದೇಶಿ ಉಗ್ರವಾದಿಗಳು ಭಾರತದ ಮೇಲೆ ನಡೆಸುತ್ತಿರುವ ಕುತಂತ್ರಗಳಿಗೆ ಭಾರತ ಸರಿಯಾದ ರೀತಿಯಲ್ಲಿ ಉತ್ತರ ನೀಡಬೇಕು ಎನ್ನುವ ಕೋಟ್ಯಂತರ ಭಾರತೀಯರ ಒತ್ತಾಸೆಗೆ ಪೂರಕವಾಗಿ ಮೂರು ಸೇನಾಪಡೆಗಳ ಸಮನ್ವಯದಿಂದ ಮಂಗಳವಾರ ನಡುರಾತ್ರಿಯಲ್ಲಿ ಭಾರತದ ಸೈನ್ಯ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ, ಉಗ್ರವಾದಿಗಳು ಹಾಗೂ ಉಗ್ರವಾದಿಗಳನ್ನು ಬೆಂಬಲಿಸುವವರಿಗೆ ಮುಟ್ಟಿ ನೋಡಿಕೊಳ್ಳುವ ರೀತಿಯಲ್ಲಿ ಉತ್ತರ ನೀಡಿದೆ.

ಭಯೋತ್ಪಾದಕರು ಹಾಗೂ ಉಗ್ರವಾದಿಗಳ ನಿಗ್ರಹಕ್ಕಾಗಿ ನಡೆಯುತ್ತಿರುವ ಕಾರ್ಯಾಚರಣೆಯ ಈ ಸಂದಿಗ್ಧ ಕಾಲದಲ್ಲಿ ದೇಶವಾಸಿಗಳಾದ ನಾವೆಲ್ಲ ಒಟ್ಟಾಗಿರಬೇಕು ಹಾಗೂ ನಮ್ಮನ್ನು ರಕ್ಷಣೆ ಮಾಡುವ ಸೈನಿಕರಿಗಾಗಿ ದೇವರಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article