ಸಾಲಬಾಧೆ-ಕುಟುಂಬದ ಆತ್ಮಹತ್ಯೆ ಯತ್ನ: ಇಬ್ಬರ ಸಾವು, ಒಬ್ಬರ ರಕ್ಷಣೆ

ಸಾಲಬಾಧೆ-ಕುಟುಂಬದ ಆತ್ಮಹತ್ಯೆ ಯತ್ನ: ಇಬ್ಬರ ಸಾವು, ಒಬ್ಬರ ರಕ್ಷಣೆ


ಕುಂದಾಪುರ: ಒಂದೇ ಕುಟುಂಬದ ಮೂವರು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿ ತಂದೆ, ಮಗ ಸಾವನ್ನಪ್ಪಿ ತಾಯಿಯನ್ನು ರಕ್ಷಿಸಿದ ಘಟನೆ ಮೇ. 15 ರಂದು ಗುರುವಾರ ಬೆಳಿಗ್ಗೆ ಕುಂದಾಪುರ ತಾಲೂಕಿನ ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ನಡೆದಿದೆ.

ಮೃತರನ್ನು ಮಾಧವ ದೇವಾಡಿಗ (55), ಪ್ರಸಾದ್ ದೇವಾಡಿಗ (22) ಎಂದು ಗುರುತಿಸಲಾಗಿದೆ.

ತಾಯಿ ತಾರಾ ದೇವಾಡಿಗ ಅವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಗಿದೆ.


ಮೂಲತಃ ಕುಂದಾಪುರದವರಾದ ಇವರು ತೆಕ್ಕಟ್ಟೆ ಮೀನು ಮಾರುಕಟ್ಟೆ ಸಮೀಪ ಶಂಕರ್ ಶೆಟ್ಟಿ ಅವರ ಕಟ್ಟಡದಲ್ಲಿ ಸುಮಾರು ಏಳು ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.

ತಂದೆ ಮತ್ತು ಮಗ ಕುಂದಾಪುರ ರಿಲಯನ್ಸ್ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಕುಂಭಾಸಿ ಚಂಡಿಕಾ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ  ಕೆಲಸ ಮಾಡುತ್ತಿದ್ದರು.


ಗುರುವಾರ ಬೆಳಿಗ್ಗೆ 6 ಗಂಟೆ ಸುಮಾರಿಗೆ ಪಕ್ಕದ ಮನೆಯ ಮಹಿಳೆ ರಂಗೋಲಿ ಹಾಕಲೆಂದು ಮನೆಯಿಂದ ಹೊರಗಡೆ ಬಂದಾಗ ಮನೆಯ ಎದುರುಗಡೆ ಇದ್ದ ಬಾವಿಯಲ್ಲಿ ಕಿರುಚುವ ಶಬ್ದ ಕೇಳಿ ಬಾವಿಯಲ್ಲಿ ಇಣುಕಿ ನೋಡುವಾಗ ಮಹಿಳೆ ಬಾವಿಯಲ್ಲಿ ಒದ್ದಾಡುತ್ತಿರುವುದನ್ನು ಕಂಡು ಅಕ್ಕ ಪಕ್ಕದವರನ್ನು ಕರೆದು ತಿಳಿಸಿದರು. ಅಗ್ನಿಶಾಮಕ ದಳದವರೂ ಆಗಮಿಸಿದರು. ಎಲ್ಲರೂ ಸೇರಿ ತಕ್ಷಣ ಮಹಿಳೆಯನ್ನು ಮೇಲೆತ್ತಿ ರಕ್ಷಿಸಲಾಯಿತು. ಅಷ್ಟರಲ್ಲಿ ಪತಿ, ಮತ್ತು ಮಗ ಮೃತಪಟ್ಟಿದ್ದಾರೆ.


ಮೃತ ದೇಹಗಳನ್ನು ಬಾವಿಯಿಂದ ಹೊರಗೆ ತೆಗೆಯಲಾಯಿತು. ಮನೆಯಲ್ಲಿ ಡೆತ್ ನೋಟ್ ಸಿಕ್ಕಿದ್ದು ಕುಟುಂಬಕ್ಕೆ ಸಾಲಭಾದೆ ಕಾಡುತ್ತಿದ್ದು, ಮರ್ಯಾದೆಗೆ ಅಂಜಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಕೋಟ ಠಾಣೆ ಪಿಎಸ್ಐ ರಾಘವೇಂದ್ರ ಸಿ. ಘಟನಾ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದ್ದಾರೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕುಂದಾಪುರಕ್ಕೆ ಸಾಗಿಸಲಾಯಿತು.

ತೆಕ್ಕಟ್ಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಕೋಟ ಠಾಣಾ ಸಿಬ್ಬಂದಿಗಳು ಹಾಗೂ ಅಗ್ನಿ ಶಾಮಕದಳದವರು ಸಹಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article