
ಟಿಂಟ್ ವಿರುದ್ಧ ಕಾರ್ಯಾರಚಣೆ
Monday, May 12, 2025
ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸರು ವಿವಿಧ ಕಡೆಗಳಲ್ಲಿ ವಿಶೇಷ ಚೆಕ್‌ಪೋಸ್ಟ್‌ಗಳನ್ನು ತೆರೆದು ವಾಹನಗಳ ತಪಾಸಣೆ ಕಾರ್ಯವನ್ನು ವಾಹನಗಳ ದಾಖಲಾತಿಗಳನ್ನು ಪರಿಶೀಲನೆಯನ್ನು ನಡೆಸಲಾಗುತ್ತಿದೆ. ನಗರದ ವ್ಯಾಪ್ತಿಯಲ್ಲಿ ಸಂಚಾರಿ ಪೊಲೀಸರು ಟಿಂಟೆಡ್ ಗ್ಲಾಸ್‌ಗಳನ್ನು ಅಳವಡಿಸಿ ಸಂಚಾರಿಸುವ ವಾಹನಗಳನ್ನು ಪತ್ತೆ ಹಚ್ಚುವ ವಿಶೇಷ ಕಾರ್ಯಚರಣೆಯನ್ನು ನಡೆಸಿ, ಕಳೆದ 10 ದಿನಗಳಲ್ಲಿ ವರೆಗೆ ಒಟ್ಟು 504 ಕಾರುಗಳ ವಿರುದ್ದ ಪ್ರಕರಣವನ್ನು ದಾಖಲಿಸಿ ದಂಡ ವಿಧಿಸಿದ್ದಾರೆ.
ವಾಹನಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಸೂಕ್ತ ತಿಳುವಳಿಕೆ ನೀಡಲಾಗಿದೆ. ಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರೆಯಲಿದ್ದು, ಸಾರ್ವಜನಿಕರು ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ಸೂಚಿಸಲಾಗಿದೆ.