
ಜಿಲ್ಲೆಯ ವಿದ್ಯಮಾನ: ಸಚಿವರಿಂದ ಅವಲೋಕನ
Saturday, May 3, 2025
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ವಿದ್ಯಮಾನದ ಬಗ್ಗೆ ಅವಲೋಕಿಸಲು ಮಂಗಳೂರಿಗೆ ಆಗಮಿಸಿದ ರಾಜ್ಯ ಗೃಹಸಚಿವ ಡಾ. ಜಿ. ಪರಮೇಶ್ವರ ಅವರನ್ನು ದ.ಕ.ಜಿಲ್ಲೆಯ ಕಾಂಗ್ರೆಸ್ ನಲ್ಲಿರುವ ಮುಸ್ಲಿಂ ಮುಖಂಡರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ.
ನಗರದ ಸರ್ಕ್ಯೂಟ್ ಹೌಸ್ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸಮ್ಮುಖ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪಕ್ಷದ ಕಾರ್ಯಕರ್ತರ ಅಹವಾಲು ಆಲಿಸುತ್ತಿದ್ದರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಕೆ.ಕೆ.ಶಾಹುಲ್ ಹಮೀದ್, ಮಾಜಿ ಮೇಯರ್ ಕೆ. ಅಶ್ರಫ್, ಸುಹೈಲ್ ಕಂದಕ್ ಮತ್ತಿತರರು ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಕೂಡ ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ. ಪೊಲೀಸ್ ಇಲಾಖೆಯು ಸಂಘಪರಿವಾರದ ತಾಳಕ್ಕೆ ತಕ್ಕಂತೆ ಕುಣಿಯುತ್ತಿದೆ. ಮುಸ್ಲಿಮರ ಕೊಲೆ, ಕೊಲೆಯತ್ನ ಪ್ರಕರಣಗಳು ಹೆಚ್ಚುತ್ತಿವೆ ಎಂದು ಅಸಮಾನ ವ್ಯಕ್ತಪಡಿಸಿದರು.
ಪಕ್ಷದ ಜಿಲ್ಲಾ ಮಟ್ಟದ ನಾಯಕರು, ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದ ಗೃಹಸಚಿವರು ಸೂಕ್ತ ಕ್ರಮದ ಭರವಸೆ ನೀಡಿರುವುದಾಗಿ ಮೂಲಗಳು ತಿಳಿಸಿವೆ.