
ಅಬ್ದುಲ್ ರಹ್ಮಾನ್ ಕೊಲೆ: ಮೂವರು ವಶಕ್ಕೆ..?
Wednesday, May 28, 2025
ಮಂಗಳೂರು: ಬಂಟ್ವಾಳದಲ್ಲಿ ಮಂಗಳವಾರ ನಡೆದ ಅಬ್ದುಲ್ ರಹ್ಮಾನ್ ಕೊಲೆ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಕೊಲೆ ಕೃತ್ಯದಲ್ಲಿ ಸುಮಾರು 15 ಮಂದಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿದ್ದು, ಕೃತ್ಯ ನಡೆದ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಆ ಪೈಕಿ ಮೂವರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ.