
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವರ್ಗಾಯಿಸಲು ಸತೀಶ್ ಕುಂಪಲ ಆಗ್ರಹ
Friday, May 2, 2025
ಮಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ಒಲೈಕೆಯಿಂದ ಹಿಂದುಗಳ ಜೀವನ ದುಸ್ತರವಾಗಿದೆ. ಜಿಲ್ಲೆಯಲ್ಲಿ ಮತಾಂಧರು ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆಗೈದು ಅಟ್ಟಹಾಸ ಮರೆದಿದ್ದಾರೆ ಇದಕ್ಕೆ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ.
ಇಂತಹ ಕ್ರಿಮಿನಲ್ ಸರ್ಕಾರದಿಂದ ನ್ಯಾಯ ದೊರಕುವ, ಕೊಲೆಗಡುಕರಿಗೆ ಶಿಕ್ಷೆಯಾಗುವ ನಂಬಿಕೆ ಹಿಂದೂ ಸಮಾಜಕ್ಕಿಲ್ಲ, ತಕ್ಷಣ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವರ್ಗಾಯಿಸಬೇಕೆಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಕಾನೂನು ಭಂಜಕರಿಗೆ ರಾಜಾರೋಷವಾಗಿ ಮೆರೆಯಲು ಅವಕಾಶ ನೀಡುತ್ತಿರುವ ಈ ಸರ್ಕಾರ ತೊಲಗಬೇಕು. ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಯದ ವಾತಾವರಣ ನಿರ್ಮಿಸಲು, ಸಂಘಟನೆ, ಪಕ್ಷದ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಕಾಂಗ್ರೆಸ್‌ಗೆ ನೆಲೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಹೊರಟಿರುವುದು ಆತಂಕಕಾರಿಯಾಗಿದೆ. ಹಿಂದೂ ಸಮಾಜ ಒಟ್ಟಾಗಿ ಹೋರಾಡುವುವ ಅನಿವಾರ್ಯ ಪರಿಸ್ಥಿತಿಯಲ್ಲಿ ಇದ್ದೇವೆ ಎಂದು ಕುಂಪಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.