ಮಂಗಳೂರು: ದ.ಕ. ಜಿಲ್ಲೆಯಲ್ಲಿ ನಿರಂತರವಾಗಿ ನಾಲ್ಕು ದಿನಗಳಿಂದ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳು ಮತ್ತಷ್ಟು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹವಮಾನ ಇಲಾಖೆ ರೆಡ್ ಅಲಾರ್ಟ್ ಘೋಷಿಸಿದ್ದು, ಮುಂಜಾಗೃತ ಕ್ರಮವಾಗಿ ಮೇ 27 ಮತ್ತು 28 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಿಸಿದ್ದಾರೆ.