ಗುಪ್ತಾಂಗ ತೋರಿಸಿದ ಗ್ರಾ.ಪಂ. ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ಗುಪ್ತಾಂಗ ತೋರಿಸಿದ ಗ್ರಾ.ಪಂ. ಉಪಾಧ್ಯಕ್ಷ ಬಿಜೆಪಿಯಿಂದ ಉಚ್ಛಾಟನೆ

ಮಂಗಳೂರು: ಗ್ರಾಮ ಪಂಚಾಯತ್ ಉಪಾಧ್ಯಕ್ಷನೊಬ್ಬ ಸಾರ್ವಜನಿಕವಾಗಿ ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದಿರುವ ಘಟನೆ ಬಂಟ್ವಾಳ ವಿಟ್ಲ ಸಮೀಪದ ಇಡ್ಕಿದು ಗ್ರಾಮದಲ್ಲಿ ನಡೆದಿದ್ದು, ಉಪಾಧ್ಯಕ್ಷನನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ.

ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪದ್ಮನಾಭ ಸಫಲ್ಯ ತನ್ನ ಗುಪ್ತಾಂಗ ತೋರಿಸಿದ್ದಾನೆ. ರಸ್ತೆ ವಿವಾದ ಸಂಬಂಧ  ಮನೆ ದಾರಿಗೆ ಗೇಟು ಅಳವಡಿಸಿರುವುದನ್ನು ಪ್ರಶ್ನಿಸಿದ್ದಕ್ಕೆ ಮಹಿಳೆಗೆ ಗುಪ್ತಾಂಗ ತೋರಿಸಿದ್ದು, ಈ ಸಂಬಂಧ ಮಹಿಳೆ ಪದ್ಮನಾಭ ಸಪಲ್ಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾಗುತ್ತಿದ್ದಂತೆಯೇ ಪದ್ಮನಾಭ ಸಪಲ್ಯನನ್ನು ಬಿಜೆಪಿಯಿಂದ ಉಚ್ಛಾಟಿಸಲಾಗಿದೆ. 

ತಮ್ಮ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ತನ್ನ ಮನೆಗೆ ಬರುದ ದಾರಿಯಲ್ಲಿ ಯಾರೋ ಕೆಲಸ ಮಾಡುವ ಶಬ್ಧ ಕೇಳಿ ಬಂದಿದೆ. ಹೀಗಾಗಿ ಸ್ಥಳಕ್ಕೆ ತೆರಳಿ ವಿಡಿಯೋ ಮಾಡಿದ್ದು, ಇದನ್ನು ನೋಡಿದ ಪದ್ಮನಾಭ ತನ್ನ ಚಡ್ಡಿಯನ್ನು ಕೆಳಗೆ ಜಾರಿಸಿ ಗುಪ್ತಾಂಗ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ ಬಿಎನ್‌ಎಸ್ 2023ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಿಜೆಪಿಯಿಂದ ಉಚ್ಛಾಟನೆ

ಪದ್ಮನಾಭ ಸಪಲ್ಯನನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವವನ್ನು ರದ್ದುಗೊಳಿಸಿ, ಪಕ್ಷದಿಂದ ಉಚ್ಚಾಟಿಸಿ ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜರೆಮಾರು ಆದೇಶಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article