ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ ಸೂಚನೆ

ಮಂಗಳೂರು: ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.  ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು  ಪ್ರವಾಸಿಗರು/ಸಾರ್ವಜನಿಕರು ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆರಳದಿರಲು ಸೂಚಿಸಿರುತ್ತದೆ.  ಹಾಗಾಗಿ ಹೋಟೆಲ್/ರೆಸಾರ್ಟ್ /ಹೋಂ ಸ್ಟೇಗಳಲ್ಲಿ ತಂಗುವ ಪ್ರವಾಸಿಗರಿಗೆ ಗುಡ್ಡ ಪ್ರದೇಶದ ಚಾರಣಕ್ಕೆ, ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ತಿಳಿಸಿ ಮುಂಜಾಗ್ರತಾ ಕ್ರಮವಹಿಸಲು ಹೋಟೆಲ್/ರೆಸಾರ್ಟ್ /ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಅಹಿತಕರ ಘಟನೆಗಳು ಸಂಭವಿಸಿದಲ್ಲಿ ಮಾಲೀಕರೇ ನೇರ ಹೊಣೆಗಾರರಾಗುತ್ತಾರೆ. ನಿರ್ಲಕ್ಷಿಸಿದ್ದಲ್ಲಿ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article