.jpeg)
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಅಭಿನಂದನೆ
Friday, May 2, 2025
ಮಂಗಳೂರು: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು. ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು ಈ ಸಾಧನೆಗೆ ಕಾರಣರಾದ ಎಲ್ಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅಭಿನಂದನಾರ್ಹರು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶೈಕ್ಷಣಿಕ ಜೀವನದ ಬಹುಮುಖ್ಯ ಹಂತವಾಗಿರುವ ಎಸ್‌ಎಸ್‌ಎಲ್‌ಸಿ, ನಿಮ್ಮ ಮುಂದಿನ ಭವಿಷ್ಯವನ್ನು ನಿರ್ಧರಿಸಲಿದೆ. 625 ಅಂಕಗಳಿಗೆ 625 ಅಂಕ ಪಡೆದ 22 ವಿದ್ಯಾರ್ಥಿಗಳಿಗೂ ನನ್ನ ಶುಭ ಹಾರೈಕೆಗಳು. ಅನುತ್ತೀರ್ಣರಾದ ವಿದ್ಯಾರ್ಥಿಗಳು ಹತಾಶರಾಗದೆ ಮುಂದಿನ ಪರೀಕ್ಷೆಗೆ ತಯಾರಾಗಿ, ಯಶಸ್ಸು ನಿಮ್ಮದಾಗಲಿ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.