ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿ ಡಾ. ಅರುಣ್ ಕೆ. ಅಧಿಕಾರ ಸ್ವೀಕಾರ


ಮಂಗಳೂರು: ಸರ್ಕಾರದ ಆದೇಶದಂತೆ ಇಲ್ಲಿಯ ತನಕ ದ.ಕ‌. ಜಿಲ್ಲೆಯ ನೂತನ ಎಸ್ಪಿಯಾಗಿದ್ದ ಡಾ. ಅರುಣ್ ಕುಮಾರ್ ಕೆ. ಅವರು ಅಧಿಕಾರ ವಹಿಸಿಕೊಂಡರು.

ಕಾನೂನು ಸುವ್ಯವಸ್ಥೆ ಕಾಪಾಡುವುದು ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ(Moral Policing) ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು. ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ಮುಕ್ತವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಛೇರಿಗೆ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು‌ ಎಂದು ತಿಳಿಸಿದ್ದಾರೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article