
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ರಾಜ್ಯ ಕಾಂಗ್ರೆಸ್ ನೇರ ಕಾರಣ: ಶಾಸಕ ಕಾಮತ್ ಆರೋಪ
Thursday, May 1, 2025
ಮಂಗಳೂರು: ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯ ಸಾವಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ನೇರ ಕಾರಣ ಎಂದು ಶಾಸಕ ವೇದವ್ಯಾಸ ಕಾಮತ್ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ.
ಎಸ್.ಡಿ.ಪಿ.ಐ, ಪಿ.ಎಫ್.ಐ.ನಂತಹ ಮತಾಂಧ ಶಕ್ತಿಗಳ ಮೇಲಿನ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಅವರಿಗೆ ಇನ್ನಷ್ಟು ದುಷ್ಕೃತ್ಯಕ್ಕೆ ಬೆಂಬಲಿಸಿದ್ದೇ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ.
ಕೂಡಲೇ ಪೊಲೀಸ್ ಇಲಾಖೆ ಹಂತಕರ ಹೆಡೆಮುರಿ ಕಟ್ಟಿ, ಕಾನೂನಿನ ಬಲೆಯೊಳಗೆ ತಂದು ನಿಲ್ಲಿಸಬೇಕು ಎಂದು ಶಾಸಕ ಕಾಮತ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.