
ಸುಹಾಸ್ ಶೆಟ್ಟಿ ಹತ್ಯೆ ಎನ್‌ಐಎಗೆ ವಹಿಸಲು ಒತ್ತಾಯ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ಯತ್ನ
Friday, May 16, 2025
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಎನ್‌ಐಎಗೆ ವಹಿಸಲು ಒತ್ತಾಯಿಸಿ ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ಯುವ ಮೋರ್ಚಾದಿಂದ ಕಪ್ಪು ಬಾವುಟ ಪ್ರದರ್ಶನ ಯತ್ನ ನಡೆಯಿತು.
ನೂತನ ಜಿಲ್ಲಾಧಿಕಾರಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಮಂಗಳೂರಿಗೆ ಆಗಮಿಸುತ್ತಿದ್ದು ಈ ವೇಳೆ ಮಂಗಳೂರು ಉತ್ತರ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯೆಯ್ಯಾಡಿ ಜಮಾಯಿಸಿದ್ದ ಕಾರ್ಯಕರ್ತರು ಮಂಗಳೂರು ವಿಮಾನ ನಿಲ್ದಾಣದಿಂದ ಸಾಗುತ್ತಿದ್ದ ವೇಳೆ ಕಪ್ಲು ಬಾವುಟ ಪ್ರದರ್ಶಿಸಿ ಆಕ್ರೋಶ ಹೊರಹಾಕಿದ್ದಾರೆ.
ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದ್ದಾರೆ. ಈ ವೇಳೆ ಆಕ್ರೋಶ ಹೊರ ಹಾಕಿದ ಬಿಜೆಪಿ ಕಾರ್ಯಕರ್ತರು ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಲು ಒತ್ತಾಯಿಸಿದ್ದಾರೆ.
ಹತ್ಯೆಯಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆ ಕಾರ್ಯಕರ್ತರ ಭಾಗಿಯಾಗಿರುವ ಹಿನ್ನೆಲೆಯಲ್ಲಿ ತನಿಖೆಯನ್ನು ಎನ್‌ಐಎಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೇ.1ರಂದು ಬಜಪೆಯ ಕಿನ್ನಿಪದವು ಬಳಿ ಸುಹಾಸ್ ಹತ್ಯೆ ನಡೆದಿತ್ತು, ಪ್ರಕರಣ ಸಂಬಂಧ ಈಗಾಗಲೇ ಹನ್ನೊಂದು ಮಂದಿಯನ್ನು ಬಂಧಿಸಲಾಗಿದೆ.