ಮಾವು ಮೇಳಕ್ಕೆ ಚಾಲನೆ: ನೀರೂರಿಸುವ ವಿವಿಧ ತಳಿಯ ಮಾವುಗಳು

ಮಾವು ಮೇಳಕ್ಕೆ ಚಾಲನೆ: ನೀರೂರಿಸುವ ವಿವಿಧ ತಳಿಯ ಮಾವುಗಳು


ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕಾ ಇಲಾಖೆ ಆಶ್ರಯದಲ್ಲಿ  ನಗರದ ಕದ್ರಿ ಉದ್ಯಾನವನದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ಮಾವು ಮೇಳ ಮೇ 18 ಭಾನುವಾರದವರೆಗೆ ನಡೆಯಲಿದೆ.

ಮಾವು ಮೇಳಕ್ಕೆ ಕದ್ರಿ ಪಾರ್ಕ್‌ನ  ಆವರಣದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಮೇಳದಲ್ಲಿ ವಿವಿಧ ತಳಿಯ ಮಾವುಗಳ ಪ್ರದರ್ಶನ ಹಾಗೂ ಮಾರಾಟ ಮಾಡಲಾಗುತ್ತಿದೆ. ವಿದೇಶದಲ್ಲಿ ಬೆಳೆಯುವ ಮಾವಿನ ಹಣ್ಣುಗಳನ್ನು ನಮ್ಮ ರೈತರು ಬೆಳೆದು ಇಲ್ಲಿ ಮಾರಾಟ ಮಾಡುತ್ತಿದ್ದಾರೆ. ನೈಸರ್ಗಿಕವಾಗಿ ಬೆಳೆದ ಹಾಗೂ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳು ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ನೇರವಾಗಿ ರೈತರು ಮಧ್ಯವರ್ತಿಗಳ ಹಾವಳಿ ಇಲ್ಲದೆ ಇಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾಮನಗರ, ಚೆನ್ನಪಟ್ಟಣ, ಕೋಲಾರ, ಕನಕಪುರ, ಮಾಗಡಿ ಮುಂತಾದ ಸ್ಥಳಗಳಿಂದ ರೈತರು ಬಂದಿದ್ದು, ಈ ಮೂಲಕ ಸಾವಯವ ಕೃಷಿ ಮಾಡುವ ರೈತರಿಗೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.

ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಟ್ಯಾನಿ ಅಲ್ವಾರಿಸ್, ಪ್ರವೀಣ್ ಚಂದ್ರ ಆಳ್ವ, ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕ ಮಂಜುನಾಥ್  ಉಪಸ್ಥಿತರಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article