ಸೂಟರ್ ಪೇಟೆ ಪ್ರಜ್ವಲ್ ಯುವಕ ಮಂಡಲದ ವಾರ್ಷಿಕೋತ್ಸವ:  ಸಾಧಕರಿಗೆ ಸನ್ಮಾನ, ಮಕ್ಕಳಿಗೆ ಪುಸ್ತಕ ವಿತರಣೆ

ಸೂಟರ್ ಪೇಟೆ ಪ್ರಜ್ವಲ್ ಯುವಕ ಮಂಡಲದ ವಾರ್ಷಿಕೋತ್ಸವ: ಸಾಧಕರಿಗೆ ಸನ್ಮಾನ, ಮಕ್ಕಳಿಗೆ ಪುಸ್ತಕ ವಿತರಣೆ


ಮಂಗಳೂರು: ಸೂಟರ್ ಪೇಟೆ ಪ್ರಜ್ವಲ್ ಯುವಕ ಮಂಡಲ(ರಿ) ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಘಟನೆಯಾಗಿ ಕಳೆದ 27 ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ. ಇದರ 27ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ, ಮಕ್ಕಳಿಗೆ ಪುಸ್ತಕ ವಿತರಣಾ ಸಮಾರಂಭ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದ ಶ್ರೀ ಬಬ್ಬುಸ್ವಾಮಿ ರಂಗಮಂದಿರದಲ್ಲಿ ನಡೆಯಿತು.

ಸಮಾರಂಭವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿ, ಮಾತನಾಡಿ, ‘ಇಂದು ಶಿಕ್ಷಣಕ್ಕೆ ಬಹಳಷ್ಟು ಮಹತ್ವವಿದೆ. ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಪಡೆಯಬಹುದು. ಈ ನಿಟ್ಟಿನಲ್ಲಿ ಪ್ರಜ್ವಲ್ ಯುವಕ ಮಂಡಲ ನಿರಂತರ 27 ವರ್ಷಗಳಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ’ ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ಪ್ರಜ್ವಲ್ ಯುವಕ ಮಂಡಲದ ಗೌರವಾಧ್ಯಕ್ಷ, ನಿವೃತ್ತ ತಹಶೀಲ್ದಾರ್ ಪಿ.ಬಾಬು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದ ಗುರಿಕಾರ ಎಸ್. ರಾಘವೇಂದ್ರ, ಮಾಜಿ ಕಾರ್ಪೊರೇಟರ್ ಎಸ್. ಭರತ್ ಕುಮಾರ್, ಜಾನಪದ ವಿದ್ವಾಂಸ ಕೆ.ಕೆ. ಪೇಜಾವರ, ಕ್ರೀಡಾ ಅಂಕಣಕಾರ ಎಸ್. ಜಗದೀಶ್ಚಂದ್ರ ಅಂಚನ್ ಭಾಗವಹಿಸಿದರು.

ಈ ಸಂದರ್ಭದಲ್ಲಿ ಯುವಕ ಮಂಡಲದ ಅಧ್ಯಕ್ಷ ಲೋಕೇಶ್ ನಂಬಿಯಾರ್, ಉಪಾಧ್ಯಕ್ಷ ರವೀಂದ್ರ, ಪ್ರಧಾನ ಕಾರ್ಯದರ್ಶಿ ಪ್ರದೀಪ್, ಜೊತೆ ಕಾರ್ಯದರ್ಶಿ ಸುರಕ್ಷಿತ್, ಖಜಾಂಚಿ ಅಭಿಲಾಷ್, ಮಾಜಿ ಅಧ್ಯಕ್ಷರುಗಳಾದ ಎಸ್. ಜಗನ್ನಾಥ್, ಯಾದವ್ ಮಜಿಲಕೋಡಿ, ಲಕ್ಷ್ಮಣ್ ಪಡೀಲ್, ಶರತ್, ಪ್ರಮೋದ್, ಕಿಶೋರ್ ಕುಮಾರ್, ಸೃಜನ್ ಪೇಜಾವರ ಮತ್ತಿತರರು ಉಪಸ್ಥಿತರಿದ್ದರು.

ಸನ್ಮಾನ: 

ಈ ಸಂದರ್ಭದಲ್ಲಿ ಊರಿನ ಮತ್ತೊಂದು ಯುವ ಸಂಘಟನೆ ವಿಜಯ ಫ್ರೆಂಡ್ಸ್ ಸರ್ಕಲ್ 25 ವರ್ಷವನ್ನು ಪೂರೈಸಿರುವುದು ಗುರುತಿಸಿ ಅದರ ಅಧ್ಯಕ್ಷೆ ಭವಾನಿ ಸುದೇಶ್ ಹಾಗೂ ವೇದಾ ವಿಶ್ವನಾಥ್ ಅವರನ್ನು ಸನ್ಮಾನಿಸಲಾಯಿತು. ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಮಾಡಲಾಯಿತು. ರಾತ್ರಿ ರಂಗುರಂಗಿನ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಚೈತನ್ಯ ಕಲಾವಿದರು ಬೈಲೂರು ಅವರ ‘ಅಷ್ಟಮಿ’ ನಾಟಕ ಪ್ರದರ್ಶನಗೊಂಡಿತು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article