ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮೂವರು ಆರೋಪಿಗಳ ಸೆರೆ


ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರಿನ ಕಳವಾರು ಗ್ರಾಮದ ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜರ್ ಯಾನೆ ಅಜ್ಜು(29), ಮಂಗಳೂರಿನ ಬಜ್ಪೆಯ ಉಸ್ಮಾನಿಯಾ ಮಸೀದಿಯ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24), ಹಾಸನ ಜಿಲ್ಲೆಯ ಕೆ.ಆರ್. ಪುರಂನ ನಿವಾಸಿ ನೌಷದ್ ಯಾನೆ ವಾಮಂಜೂರು ನೌಷದ್ ಯಾನೆ ಚೊಟ್ಟೆ ನೌಷದ್(39) ಬಂಧಿತ ಆರೋಪಿಗಳು.

ಆರೋಪಿಗಳ ಪೈಕಿ ಅಜರುದ್ದೀನ್ ಯಾನೆ ಅಜರ್ ಯಾನೆ ಅಜ್ಜು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿದೆ. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದನು.

ಆರೋಪಿ ಅಬ್ದುಲ್ ಖಾದರ್ ಯಾನೆ ನೌಫಲ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದನು. 

ಇನ್ನೋರ್ವ ಆರೋಪಿ ನೌಷದ್ ಯಾನೆ ವಾಮಂಜೂರು ನೌಷದ್ ಯಾನೆ ಚೊಟ್ಟೆ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದಾನೆ. ಈತನು ಈ ಹಿಂದೆ ಸುರತ್ಕಲ್, ಬಜ್ಪೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿವೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಗಳ ಪೈಕಿ ಅಜರುದ್ದೀನ್ ಯಾನೆ ಅಜರ್ ಯಾನೆ ಅಜ್ಜು ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರೋಪಿಗಳಾದ ಅಬ್ದುಲ್ ಖಾದರ್ ಯಾನೆ ನೌಫಲ್ ಮತ್ತು ನೌಷದ್ ಯಾನೆ ವಾಮಂಜೂರು ನೌಷದ್ ಯಾನೆ ಚೊಟ್ಟೆ ನೌಷದ್ ಎಂಬವರನ್ನು ಹೆಚ್ಚಿನ ತನಿಖೆ ಕುರಿತು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article