
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಬಂದ್: ಅಲ್ಲಲ್ಲಿ ಕಲ್ಲು ತೂರಾಟ, ಬಸ್‌ಗಳಿಗೆ ಹಾನಿ: ಸಂಪೂರ್ಣ ಸ್ತಬ್ಧ
Friday, May 2, 2025
ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಹಿಂದುತ್ವ ಸಂಘಟನೆಗಳಿಂದ ಬಂದ್‌ಗೆ ಕರೆ ನೀಡಿದ್ದ ಹಿನ್ನೆಲೆಯಲ್ಲಿ ಅಲ್ಲಲ್ಲಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿದೆ.
ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೂ ಕಲ್ಲು ತೂರಾಟ ನಡೆದಿರುವ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಬೆಳಗ್ಗೆ 7.30ರ ಗಂಟೆ ವರೆಗೆ ಬಸ್‌ಗಳು ಸಂಚಾರ ನಡೆಸಿವೆ. ಈ ಮಧ್ಯೆ ಆರು ಬಸ್‌ಗಳಿಗೆ ಕಲ್ಲು ತೂರಾಟ ನಡೆಸಿ ಹಾನಿ ಮಾಡಲಾಗಿದೆ. ಮೈಸೂರು, ಪುತ್ತೂರುಗಳಿಗೆ ಸಂಚರಿಸುವ ಆರು ಬಸ್‌ಗಳಿಗೆ ಕಲ್ಲು ತೂರಾಟ ಮಾಡಿ ಗಾಜುಗಳನ್ನು ಒಡೆಯಲಾಗಿದೆ. ಈ ಕಾರಣ ತಾತ್ಕಾಲಿಕವಾಗಿ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪರಿಸ್ಥಿತಿಯನ್ನು ನೋಡಿಕೊಂಡು ಬಸ್ ಸಂಚಾರ ಪುನರಾರಂಭಿಸಲಾಗುವುದು. ಪೊಲೀಸರಿಂದ ಮಾಹಿತಿ ಪಡೆಯಲಾಗುತ್ತಿದೆ ಎಂದು ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಮಧ್ಯಮಕ್ಕೆ ತಿಳಿಸಿದ್ದಾರೆ.