
ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಕಾಂತಪ್ಪ ಪೂಜಾರಿಯವರ ಮನೆಗೆ ದಿನೇಶ್ ಗುಂಡೂರಾವ್, ಮಂಜುನಾಥ ಭಂಡಾರಿ ಭೇಟಿ
Friday, May 30, 2025
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯೆಲ್ಲೆಡೆ ಕಳೆದೆರಡು ವಾರಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಇಂದು ಉಳ್ಳಾಲದ ವ್ಯಾಪ್ತಿಯಲ್ಲಿ ತೀವ್ರ ಮಳೆಗೆ ಗುಡ್ಡ ಜರುದು ಮನೆಯಲ್ಲಿದ್ದ ಮೂರು ಮಕ್ಕಳ ಸಮೇತ ನಾಲ್ವರು ದಾರುಣವಾಗಿ ಸಾವನ್ನಪ್ಪಿರುತ್ತಾರೆ. ಗುಡ್ಡ ಜರಿದು ಮೂವರು ಸಾವಿಗಿಡಾದ ಕೊಣಾಜೆಯ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಕಾಂತಪ್ಪ ಪೂಜಾರಿಯವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕ ಮಂಜುನಾಥ ಭಂಡಾರಿ ಅವರು ಭೇಟಿ ನೀಡಿ ಸಂತ್ರಸ್ತರರಿಗೆ ಸಾಂತ್ವನ ಹೇಳಿದರು.
ಘಟನೆಯ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಸಂಭಾವ್ಯ ಅನಾಹುತ ತಡೆಗೆ ತುರ್ತು ಕ್ರಮ ಕೈಗೊಳ್ಳುವ ಕುರಿತು ಸಮಾಲೋಚನೆ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಐವನ್ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ.ಎ. ಭಾವ ದಕ್ಷಿಣ ಕನ್ನಡ ಜಿಲ್ಲೆಯ ಅಪಾರ ಜಿಲ್ಲಾಧಿಕಾರಿ ಸಂತೋಷ್ ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.