ಬೆಂಕಿ ಅನಾಹುತ

ಬೆಂಕಿ ಅನಾಹುತ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಪ್ರವೇಶದ್ವಾರದ ಬಳಿ ಇರುವ ಫ್ಲ್ಯಾಟ್‌ನಲ್ಲಿ ಇಂದು ಮಧ್ಯಾಹ್ನ ಬೆಂಕಿ ಅವಘಡ ಸಂಭವಿಸಿದೆ. 

ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎನ್ನಲಾಗಿದೆ. ಅದೃಷ್ಟವಶಾತ್, ಘಟನೆ ನಡೆದ ಸಮಯದಲ್ಲಿ ಫ್ಲಾಟ್ ಒಳಗೆ ಯಾರೂ ಇರಲಿಲ್ಲ ಎನ್ನಲಾಗಿದೆ. ಐದು ಅಂತಸ್ತಿನ ವಸತಿ ಕಟ್ಟಡದ ಮೂರನೇ ಮಹಡಿಯಲ್ಲಿ ಈ ಘಟನೆ ಸಂಭವಿಸಿದೆ.

ಪಕ್ಕದ ಫ್ಲ್ಯಾಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳ ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾದವು. ಯಾವುದೇ ದೊಡ್ಡ ಹಾನಿಯಾಗಿಲ್ಲ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article