
ಲೋಕಾಯುಕ್ತ ಹೆಸರಿನಲ್ಲಿ ಬೆದರಿಕೆ: ದೂರು ಸಲ್ಲಿಸಲು ಸೂಚನೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರ್ಕಾರಿ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ತಿಳಿಸುವುದೇನೆಂದರೆ, ಯಾರೋ ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಅಧಿಕಾರಿ/ಸಿಬ್ಬಂದಿಯವರಿಗೆ ತಾನು ಲೋಕಾಯುಕ್ತ ಅಧಿಕಾರಿ/ಸಿಬ್ಬಂದಿಯೆಂದು ಹೇಳಿ ಬೆದರಿಸಿ ಕೆಲಸ ಕಾರ್ಯಗಳನ್ನು ಅಸಮುಚಿತವಾಗಿ ಮಾಡಿಕೊಳ್ಳುತ್ತಿರುವುದು, ಅಧಿಕಾರಿಗಳನ್ನು ಬೆದರಿಸುವುದಾಗಿ ಮಾಹಿತಿ ಬಂದಿರುತ್ತದೆ. ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ, ಪೊಲೀಸ್ ಉಪಾಧೀಕ್ಷಕರಗಳಾಗಿ ಡಾ. ಗಾನ ಪಿ. ಕುಮಾರ್, ಸುರೇಶ್ ಕುಮಾರ್ ಪಿ, ಪೊಲೀಸ್ ನಿರೀಕ್ಷಕರುಗಳಾಗಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಇವರು ಕರ್ತವ್ಯ ನಿರ್ವಹಿಸಿರುತ್ತಾರೆ. ಈ ಅಧಿಕಾರಿಗಳ ಬಗ್ಗೆ ಲೋಕಾಯುಕ್ತ ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಪರೀಕ್ಷಿಸಬಹುದು. ಈ ಅಧಿಕಾರಿಗಳು ಅಲ್ಲದೇ ಬೇರೆ ಯಾವ ಅಧಿಕಾರಿಗಳು ಕೂಡ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವುದಿಲ್ಲ.
ಅನಾಮಧೇಯ ವ್ಯಕ್ತಿಗಳು ಸರ್ಕಾರಿ ಕಚೇರಿಗಳ ಅಧಿಕಾರಿ ಅಥವಾ ಸಿಬ್ಬಂದಿಯವರಿಗೆ ಬೆದರಿಸಿ ಕರೆ ಮಾಡಿದ್ದಲ್ಲಿ ಲೋಕಾಯುಕ್ತ ಅಧಿಕಾರಿಯವರಿಗೆ ಅಥವಾ ಕಛೇರಿಗೆ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರು ದಾಖಲಿಸಬಹುದು. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರ ಮೊಬೈಲ್ ನಂಬರ್ 9364062517, ಕಚೇರಿ ದೂರವಾಣಿ ಸಂಖ್ಯೆ 0824-2950997 ಕರೆ ಮಾಡಬಹುದು ಎಂದು ಪ್ರಕಟಣೆ ತಿಳಿಸಿದೆ.