
ಗ್ರಾ.ಪಂ. ಉಪಚುನಾವಣೆ: ನಿಷೇಧಾಜ್ಞೆ
Wednesday, May 21, 2025
ಮಂಗಳೂರು: ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಮುಕ್ತ ಮತ್ತು ನ್ಯಾಯಯುತ ಹಾಗೂ ನಿಷ್ಪಕ್ಷಪಾತವಾಗಿ ಚುನಾವಣೆಯನ್ನು ನಡೆಸುವ ನಿಟ್ಟಿನಲ್ಲಿ ಮೇ 25 ರಂದು ಬೆಳಿಗ್ಗೆ 6 ಗಂಟೆಯಿಂದ ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಗ್ರಾಮ ಪಂಚಾಯತ್‌ಗಳ ಉಪಚುನಾವಣೆ ಮೇ 2025 ನಡೆಯಲಿರುವ ಒಟ್ಟು 8 ಮತಗಟ್ಟೆ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಆನಂದ್ ಕೆ. ಆದೇಶಿಸಿದ್ದಾರೆ.