
ಮಂಗಳೂರಿನ ಶಕ್ತಿ ಪಪೂ ಕಾಲೇಜಿನಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರಥಮ ಪಿಯುಸಿಗೆ ಉಚಿತ ದಾಖಲಾತಿ
Friday, May 2, 2025
ಮಂಗಳೂರು: ಮಂಗಳೂರಿನ ಶಕ್ತಿ ಪಪೂ ಕಾಲೇಜಿನಲ್ಲಿ 2025-26ನೇ ಸಾಲಿಗೆ ಪ್ರಥಮ ಪಿಯುಸಿಯಲ್ಲಿ ದಾಖಲಾತಿ ಪಡೆಯಲು ಇಚ್ಚಿಸುವ ರಾಜ್ಯ ಪಠ್ಯಕ್ರಮ ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ, ಸಿಬಿಎಸ್‌ಇs (CBSE) ಮತ್ತು ಐಸಿಎಸ್‌ಇ (ICSE)ನಲ್ಲಿ 99% ಗಿಂತ ಹೆಚ್ಚು ಅಂಕ ಪಡೆಯುವ ರಾಜ್ಯದ ಪ್ರತಿ ಜಿಲ್ಲೆಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಉತ್ತಮ ಮೂಲಭೂತ ಸೌಕರ್ಯವನ್ನು ಹೊಂದಿರುವ ಹಾಗೂ ಅತಿ ಹೆಚ್ಚು ರಾಜ್ಯದಲ್ಲಿ ಪಿಯುಸಿ ಫಲಿತಾಂಶದಲ್ಲಿ ರ‍್ಯಾಂಕ್ ಪಡೆದಿರುವ ಶಿಕ್ಷಣ ಸಂಸ್ಥೆ ಇದಾಗಿದೆ. ಇಲ್ಲಿ ವ್ಯಾಸಂಗ ಮಾಡಲು ಇಚ್ಚಿಸುವ ವಿದ್ಯಾರ್ಥಿಗಳಿಗೆ ವಸತಿ ನಿಲಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆಸಕ್ತರು Shakthi.edu.in ಅಥವಾ 9686000046 ಮೊಬೈಲ್ ನಂಬರ್‌ಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.