ಅಪರೇಷನ್ ಸಿಂಧೂರದಲ್ಲಿ ಕಾರ್ಯಾಚರಣೆ ಮಾಡಿದ ಸೈನಿಕರಿಗೆ ಶಕ್ತಿ ತುಂಬುವ ಸಲುವಾಗಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ

ಅಪರೇಷನ್ ಸಿಂಧೂರದಲ್ಲಿ ಕಾರ್ಯಾಚರಣೆ ಮಾಡಿದ ಸೈನಿಕರಿಗೆ ಶಕ್ತಿ ತುಂಬುವ ಸಲುವಾಗಿ ಯುವ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರ


ಮಂಗಳೂರು: ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮತ್ತು ಮಂಗಳೂರು ದಕ್ಷಿಣ ವಿಧಾನಸಭಾ ಸಮಿತಿಯ ನೇತೃತ್ವದಲ್ಲಿ ಯನಪೋಯ ಆಸ್ಪತ್ರೆಯ ಸಹಯೋಗದೊಂದಿಗೆ ಅಪರೇಷನ್ ಸಿಂಧೂರದಲ್ಲಿ ಕಾರ್ಯಾಚರಣೆ ಮಾಡಿದ ಸೈನಿಕರಿಗೆ ಶಕ್ತಿ ತುಂಬುವ ಸಲುವಾಗಿ ಆದಿತ್ಯವಾರ ಮಲ್ಲಿಕಟ್ಟೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಇಬ್ರಾಹಿಂ ನವಾಝ್ ಅವರ ಅಧ್ಯಕ್ಷತೆಯಲ್ಲಿ ಬೃಹತ್ತ್ ರಕ್ತದಾನ ಶಿಬಿರ ನಡೆಯಿತು.  


ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ  ವಿಧಾನ ಪರಿಷತ್ತಿನ ಸದಸ್ಯರಾದ ಐವನ್ ಡಿಸೋಜ ಅವರು  ಆಸ್ಪತ್ರೆಗಳಲ್ಲಿ ರಕ್ತ ಕೊರತೆ ಇರುವ ಈ ಸಂದರ್ಭದಲ್ಲಿ ರಕ್ತದಾನ ಶಿಬಿರ ಬಹಳ ಉಪಯುಕ್ತ ಕಾರ್ಯಕ್ರಮ ಇದು ಪ್ರತೀ ತಾಲೂಕು ಮಟ್ಟದಲ್ಲಿ ಮುಂದುವರೆಸಿ ಎಂದು ಕರೆ ನೀಡಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ಸರ್ಕಾರದ ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹಮದ್ ಅವರು ಮಾತನಾಡಿ  ತಮ್ಮ ಜೀವನವನ್ನೆ ತ್ಯಾಗ ಮಾಡಿ ದೇಶಕಾಯುವ ಸೈನಿಕರಿಗೆ ಶಕ್ತಿ ತುಂಬುವ ಸಲುವಾಗಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಮಾಡಿದ ಈ ಕಾರ್ಯ ಬಹಳ ಶ್ವಾಘನೀಯ ಹಾಗೂ ಮಾದರಿ ಕಾರ್ಯಕ್ರಮ ಎಂದು  ಅಭಿನಂದಿಸಿದರು. 

ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ರಮನಾಥ ರೈ, ಮಂಗಳೂರು ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಮುಡಾ ಮಾಜಿ ಅದ್ಯಕ್ಷರಾದ ಸುರೇಶ್ ಬಳ್ಳಾಲ್, ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರು, ದ.ಕ ಜಿಲ್ಲೆ ಉಸ್ತುವಾರಿಗಳಾದ ಮಂಜುನಾಥ ಮಣಿ ಚೆಟ್ಟಿ, ಯುವ ಕಾಂಗ್ರೆಸ್ ಕಾರ್ಯದರ್ಶಿ ಶಿವಪ್ರಸಾದ್ ಪಾಣಾಜೆ, ಅಲ್ಪಸಂಖಾತ ಸಮಿತಿಯ ಜಿಲ್ಲಾಧ್ಯಕ್ಷರಾದ ಶಾಹುಲ್ ಹಮೀದ್, ಮಾಜಿ ಮೇಯರ್ ಶಶಿದರ್ ಹೆಗ್ಡೆ, ಕೆ ಆಶ್ರಫ್, ನವೀನ್ ಡಿಸೋಜ, ಮಂಗಳೂರು ಸಿಟಿ ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ವಿಕಾಶ್ ಶೆಟ್ಟಿ, ಅಬ್ಬಾಸ್ ಅಲಿ, ಗಿರೀಶ್ ಆಳ್ವ, ಶಬೀರ್ ಸಿದ್ದಕ್ಟಟೆ, ನಝೀರ್ ಬಜಾಲ್, ಅಶೋಕ್ ಪೂಜಾರ್ ಮುಲ್ಕಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷರಾದ ಸುನಿತ್ ಡೇಸಾ, ಬಶೀರ್ ಕಣ್ಣೂರು, ದೀಕ್ಷಿತ್ ಅತ್ತಾವರ, ಯುವ ಕಾಂಗ್ರೆಸ್ ವಿಧಾನಸಭಾ ಅಧ್ಯಕ್ಷರುಗಳಾದ ಹಕೀಂ ಕೊಕ್ಕಡ, ಜಾಕ್ಸನ್ ಮೂಡಬಿದ್ರೆ, ಪೈಝಲ್ ಕಡಬ, ಬ್ಲಾಕ್ ಅಧ್ಯಕ್ಷರುಗಳಾದ ವೆಲ್ವಿನ್, ಪೃಥ್ವಿರಾಜ್ ಪುಜಾರಿ, ಉಪಸ್ಥಿತರಿದ್ದರು.

ಯುವ ಕಾಂಗ್ರೆಸ್ ಮಂಗಳೂರು ದಕ್ಷಿಣ ವಿಧಾನಸಭಾ ಅಧ್ಯಕ್ಷ ಆಸಿಪ್ ಬಜಾಲ್ ಸ್ವಾಗತಿಸಿ, ಶ್ರುತಿ ಪ್ರವೀನ್ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article