ಮುಖ್ಯಮಂತ್ರಿಯಿಂದ ಕ್ರೀಡಾ ಸಂಕೀರ್ಣ ಉದ್ಘಾಟನೆ

ಮುಖ್ಯಮಂತ್ರಿಯಿಂದ ಕ್ರೀಡಾ ಸಂಕೀರ್ಣ ಉದ್ಘಾಟನೆ


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸ್ಮಾರ್ಟ್‌ಸಿಟಿ ಮಂಗಳೂರು ಇವರ ಆಶ್ರಯದಲ್ಲಿ ಸುಮಾರು ೩೬ ಕೋಟಿ ರು.ಗಳಲ್ಲಿ ಇಲ್ಲಿನ ಉರ್ವದಲ್ಲಿ ನಿರ್ಮಾಣಗೊಂಡ ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣವನ್ನು ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಈ ಸಂದರ್ಭ ನೂತನ ಬ್ಯಾಡ್ಮಿಂಟನ್ ಕೋರ್ಟ್‌ನಲ್ಲಿ ಆಡುವ ಮೂಲಕ ತನ್ನ ಕ್ರೀಡಾಪ್ರೇಮವನ್ನು ಮೆರೆದರು.

ಸ್ಪೀಕರ್ ಯು.ಟಿ.ಖಾದರ್, ಕಂದಾಯ ಸಚಿವ ಕೃಷ್ಣ ಭೈರೇಗೌಡ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ದ. ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಅಶೋಕ್ ರೈ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಐವನ್ ಡಿ. ಸೋಜಾ, ದ. ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್, ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್, ದ. ಕ. ಬ್ಯಾಡ್ಮಿಂಟನ್ ಅಸೋಸಿಯೇಶನ್‌ನ ಸಂತೋಷ್ ಶೆಟ್ಟಿ, ಪುರುಷೋತ್ತಮ ಪೂಜಾರಿ ಮೊದಲಾದವರಿದ್ದರು.

ವಿಳಂಬ..

ನಿಗದಿತ ಕಾರ್ಯಕ್ರಮದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳೂರು ವಿಮಾನ ನಿಲ್ದಾಣದಿಂದ ಮೊದಲು ಈ ಒಳಾಂಗಣ ಕ್ರೀಡಾಂಗಣ ಲೋಕಾರ್ಪಣೆಗೊಳಿಸಬೇಕಿತ್ತು. ಪೂರ್ವನಿಗದಿಯಂತೆ ಸಂಜೆ 3.30ಕ್ಕೆ ಮುಖ್ಯಮಂತ್ರಿಗಳು ಉರ್ವಕ್ಕೆ ಆಗಮಿಸಬೇಕಿತ್ತು. ಆದರೆ ಮುಖ್ಯಮಂತ್ರಿಗಳು ಬಳ್ಳಾರಿಯಿಂದ ಹೊರಡುವಾಗಲೇ 45 ನಿಮಿಷ ತಡವಾಗಿತ್ತು. ಹಾಗಾಗಿ ಸಂಜೆ 4.15ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದರು. ವಿಳಂಬವಾಗಿ ಆಗಮಿಸಿದ ಹಿನ್ನೆಲೆಯಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮಕ್ಕೆ ಆಗಮಿಸದೆ ನೇರವಾಗಿ ವಿಮಾನ ನಿಲ್ದಾಣದಿಂದ ಪಡೀಲಿನಲ್ಲಿ ಹೊಸ ಡಿಸಿ ಕಚೇರಿ ಸಂಕೀರ್ಣ ಲೋಕಾರ್ಪಣೆಗೆ ತೆರಳಿದರು.

ಹೊಸ ಡಿಸಿ ಕಚೇರಿ ಲೋಕಾರ್ಪಣೆಗೊಳಿಸಿ ಉಳ್ಳಾಲದಲ್ಲಿ ಉರೂಸ್ ಕಾರ್ಯಕ್ರಮದ ಮುನ್ನ ಮುಖ್ಯಮಂತ್ರಿ ಕ್ರೀಡಾ ಸಂಕೀರ್ಣವನ್ನು ಉದ್ಘಾಟಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article