
ಸಮಾಲೋಚನೆ ಸಭೆ ನಡೆಸುವಂತೆ ಸಿಎಂಗೆ ಮಂಜುನಾಥ ಭಂಡಾರಿ ಮನವಿ
Tuesday, May 13, 2025
ಮಂಗಳೂರು: ಕರಾವಳಿ ಭಾಗದ ಅಭಿವೃದ್ಧಿಗಾಗಿ ಸಮಾಲೋಚನೆ ಸಭೆ ನಡೆಸುವ ಕುರಿತಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.
ಕರಾವಳಿ ಭಾಗದ ಅಭಿವೃದ್ಧಿಗೆ ಪ್ರವಾಸೋದ್ಯಮ ಬೆಳವಣಿಗೆ, ಕೈಗಾರಿಕಾ ಸ್ಥಾಪನೆ ಮತ್ತು ಅಭಿವೃದ್ಧಿ, ನೈಸರ್ಗಿಕ ಸಂಪನ್ಮೂಲಗಳ ಸದ್ಬಳಕೆ ಹಾಗೂ ಉದ್ಯೋಗ ಸೃಜನೆಗೆ ಪ್ರಾಮುಖ್ಯತೆ ನೀಡುವ ಅಗತ್ಯವಿದ್ದು, ಈ ಕುರಿತಾಗಿ ಮೇ.16 ಮಂಗಳೂರು ಪ್ರವಾಸದ ಸಂದರ್ಭ ಅವಿಭಾಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಚುನಾಯಿತ ಪ್ರತಿನಿಧಿಗಳು, ಜಿಲ್ಲೆಯ ಕೈಗಾರಿಕೋದ್ಯಮಿಗಳು, ಬಂಡವಾಳ ಹೂಡಿಕೆದಾರರು ಹಾಗೂ ಸಂಬಂಧಿಸಿದ ಪ್ರಮುಖ ಇಲಾಖೆಯ ಅಧಿಕಾರಿಗಳ ಜೊತೆ ಪ್ರತ್ಯೇಕ ಸಮಾಲೋಚನೆ ಸಭೆಯನ್ನು ತಮ್ಮ ಅಧ್ಯಕ್ಷತೆಯಲ್ಲಿ ಆಯೋಜಿಸುವಂತೆ ಪತ್ರದಲ್ಲಿ ಶಾಸಕ ಮಂಜುನಾಥ ಭಂಡಾರಿ ಅವರು ಮುಖ್ಯಮಂತ್ರಿ ಅವರನ್ನು ಕೋರಿದ್ದಾರೆ.