ಕಳ್ಳತನ: ಅಂತರ್ ಜಿಲ್ಲಾ ಆರೋಪಿಯ ಬಂಧನ

ಕಳ್ಳತನ: ಅಂತರ್ ಜಿಲ್ಲಾ ಆರೋಪಿಯ ಬಂಧನ


ಮೂಡುಬಿದಿರೆ: ಮಂಗಳೂರು ನಗರದ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಏ. 26ರಂದು ಸಂಜೆ 4 ಗಂಟೆಯಿಂದ ಏಪ್ರಿಲ್ 28 ರ ಬೆಳಗ್ಗೆ 07.25 ಗಂಟೆಯ ಮಧ್ಯಾವಧಿಯಲ್ಲಿ ಮಾರ್ಪಾಡಿ ಗ್ರಾಮದ ಕಡಲಕೆರೆ ಇಂಡಸ್ಟ್ರೀಯಲ್ ಏರಿಯಾದ ವಿಲ್ಕರ್ಟ್ ಎಂಬ ಹೆಸರಿನ ಗೋಡೌನ್ ನ ಶಟರಿನ ಬೀಗವನ್ನು ಮುರಿದು ಮೀಟಿ ಗೋಡೌನ ಒಳಗೆ ಪ್ರವೇಶಿಸಿ ಗೋಡೌನ್ ನಲ್ಲಿದ್ದ 2 ಲ್ಯಾಪ್ಟಾಪ್ ಮತ್ತು ನಗದು ಹಣ ಇರುವ ಲಾಕರನ್ನು ಕಳ್ಳತನ ಮಾಡಿರುವ ಅಂತರ್ ಜಿಲ್ಲೆಯ ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ. 


ಕಳ್ಳತನ ಆಗಿರುವ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ದೂರು ದಾಖಲಾಗಿ ತನಿಖೆಯ ಹಂತದಲ್ಲಿತ್ತು. ಪ್ರಕರಣದ ಆರೋಪಿಗಳ ಮತ್ತು ಸೊತ್ತು ಪತ್ತೆಯ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಗೋಡೌನ್ ನಲ್ಲಿ ಕಳ್ಳತನ ಮಾಡಿದ ಅಂತರ್ ಜಿಲ್ಲಾ ಆರೋಪಿಯಾದ ರಾಯಚೂರು ಚಂದ್ರು (33) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆರೋಪಿಯು ಈ ಮೇಲಿನ ಕೃತ್ಯವನ್ನು ಎಸಗಿರುವುದಾಗಿ ಒಪ್ಪಿಕೊಂಡು, ಗೋಡೌನ್ ನಲ್ಲಿ ಕಳ್ಳತನ ಮಾಡಿದ ಎಚ್ ಪಿ ಕಂಪನಿಯ 2 ಲ್ಯಾಪ್ ಟಾಪ್ ಮತ್ತು ಲಾಕರ್ ಹಾಗೂ ಲಾಕರ್ ನಲ್ಲಿದ್ದ ಸುಮಾರು 2,88,000 ರೂ. ನಗದು ಹಣ ಮತ್ತು ಕೃತ್ಯಕ್ಕೆ ಬಳಸಿದ ಮಹೀಂದ್ರ ಕಂಪನೀಯ ಬೊಲೇರೊ ಪಿಕಪ್ ವಾಹನವನ್ನು ಕೂಡ ಸ್ವಾಧೀನ ಪಡಿಸಿಕೊಂಡಿರುವುದಾಗಿದೆ.


ಆರೋಪಿಯಿಂದ ಸ್ವಾಧೀನಪಡಿಸಿಕೊಂಡ ಸೊತ್ತುಗಳ ಒಟ್ಟು ಅಂದಾಜು ಮೌಲ್ಯ 6,50,000 ರೂ. ಆಗಬಹುದೆಂದು ಅಂದಾಜಿಸಲಾಗಿದೆ.

ಈ ಪ್ರಕರಣದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರ ಮಾರ್ಗದರ್ಶನದಂತೆ ಡಿಸಿಪಿಗಳಾದ ಸಿದ್ಧಾರ್ಥ ಗೊಯಲ್, ರವಿಶಂಕರ್ ಮತ್ತು ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಶ್ರೀಕಾಂತ್.ಕೆ ಅವರ ನಿರ್ದೇಶನದಂತೆ ಮೂಡುಬಿದಿರೆ ಠಾಣಾ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ. ಅವರ ನೇತೃತ್ವದ ತಂಡ ಪಿ.ಎಸ್.ಐ. ಪ್ರತಿಭಾ ಕೆ.ಸಿ., ಹಾಗೂ ಎ.ಎಸ್.ಐ ರಾಜೇಶ್ ಮತ್ತು ಹೆಚ್.ಸಿ ಗಳಾದ ರಾಜೇಶ್, ಮೊಹಮ್ಮದ್ ಇಕ್ಬಾಲ್, ಮೊಹಮ್ಮದ್ ಹುಸೇನ್, ಅಕೀಲ್ ಅಹಮ್ಮದ್, ನಾಗರಾಜ್ ಲಮಾಣಿ ಮತ್ತು ಪಿ.ಸಿ. ವೆಂಕಟೇಶ್ ಅವರು ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article