
ಪ್ರೌಢಶಾಲಾ ಸಹಶಿಕ್ಷಕರಿಗೆ ಪ.ಪೂ. ಉಪನ್ಯಾಸಕರ ಹುದ್ದೆ
Saturday, May 3, 2025
ಮೂಡುಬಿದಿರೆ: ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡಲು, ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಅರ್ಹ ಶಿಕ್ಷಕರ ರಾಜ್ಯ ಮಟ್ಟದ ಒಂದೇ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಇಲಾಖಾ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಸದ್ರಿ ಪಟ್ಟಿಯಲ್ಲಿ ಇರುವ ದತ್ತಾಂಶಗಳಿಗೆ ಆಕ್ಷೇಪಣೆಗಳು ಇದ್ದಲ್ಲಿ, ಶಿಕ್ಷಕರು ದಾಖಲೆಗಳೊಂದಿಗೆ ಸಂಬಂಧಿಸಿದ ಮುಖ್ಯ ಶಿಕ್ಷಕರ ಮೂಲಕ ನಿಗದಿತ ದಿನಾಂಕದೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮೂಡುಬಿದಿರೆ ಇವರಿಗೆ ಸಲ್ಲಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.