ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸಿದವರು ಟಿ.ಎಂ.ಎ.ಪೈ: ಡಾ. ಹೆಚ್.ಎಸ್. ಬಲ್ಲಾಳ್

ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶ ಕಲ್ಪಿಸಿದವರು ಟಿ.ಎಂ.ಎ.ಪೈ: ಡಾ. ಹೆಚ್.ಎಸ್. ಬಲ್ಲಾಳ್

ಮಹಾವೀರ ಕಾಲೇಜಿನಲ್ಲಿ ಸ್ಥಾಪಕರ ದಿನಾಚರಣೆ


ಮೂಡುಬಿದಿರೆ: ಶಿಕ್ಷಣದಿಂದ ವಂಚಿತರಾಗಿದ್ದ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣದ ಅವಕಾಶವನ್ನು ಕಲ್ಪಿಸಿಕೊಟ್ಟವರು ಟಿ.ಎಂ.ಎ.ಪೈ ಅವರು. ಇಂತಹ ಅವಕಾಶದಿಂದಾಗಿ ಇಂದು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಸಾಧನೆ ಮಾಡಲು ಸಹಕಾರಿಯಾಗಿದೆ ಎಂದು ಅಕಾಡೆಮಿ ಆಫ್ ಜನರಲ್ ಎಜ್ಯುಕೇಶನ್ ಮಣಿಪಾಲದ ಅಧ್ಯಕ್ಷ ಡಾ. ಹೆಚ್.ಎಸ್. ಬಲ್ಲಾಳ್ ಹೇಳಿದರು.


ಅವರು ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಶುಕ್ರವಾರ ನಡೆದ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು. 


ಇಂದಿನ ಯುವಜನತೆ ದೇಶದ ಮುಂದಿನ ನಾಯಕರಾಗುವವರಾಗಿದ್ದಾರೆ. ಆದುದರಿಂದ ಟಿ.ಎಂ.ಎ.ಪೈ ಅವರು ಶಿಕ್ಷಣ ಮತ್ತು ಆರೋಗ್ಯಕ್ಕೆ ಆಧ್ಯತೆ ನೀಡಿ ಹಲವು ಪ್ರದೇಶಗಳಲ್ಲಿ ಕಾಲೇಜು ಹಾಗೂ ಆಸ್ಪತ್ರೆಗಳನ್ನು ಸ್ಥಾಪಿಸಿ ಸಮಾಜಕ್ಕೆ ಕೊಡುಗೆ ನೀಡಿದ್ದಾರೆ. ಅರವತ್ತು ವರ್ಷಗಳ ಸಂಭ್ರಮದಲ್ಲಿರುವ ಮಹಾವೀರ ಕಾಲೇಜಿನ ಸ್ಥಾಪನೆಯು ಅಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಣಕ್ಕೆ ನೀಡಿದ ಪ್ರಾಶಸ್ಥ್ಯವನ್ನು ಎತ್ತಿ ತೋರಿಸುತ್ತದೆ’ ಎಂದರು.


ಗೌರವ ಅತಿಥಿಯಾಗಿ ಭಾಗವಹಿಸಿದ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಇಂಜಿನಿಯರಿಂಗ್ ಮೂಡಬಿದಿರೆ ಇದರ ಅಧ್ಯಕ್ಷ ರಾಜೇಶ್ ಚೌಟ ಇವರು, ‘ಪದವಿ ನಂತರ ವಿದ್ಯಾರ್ಥಿಗಳಲ್ಲಿ ಅವರು ಹೊಂದಿದ ಜ್ಞಾನ ಮತ್ತು ಕೌಶಲ್ಯವೇ ಶಾಶ್ವತವಾಗಿ ಉಳಿಯುತ್ತದೆ. ಇದಕ್ಕಾಗಿ ಕಾಲೇಜಿನ ಸ್ಥಾಪಕರನ್ನು ಆದರ್ಶ ವ್ಯಕ್ತಿಗಳನ್ನಾಗಿ ತೆಗೆದುಕೊಂಡು ಸಾಧನೆ ಮಾಡಿ’ ಎಂದು ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.


ಆಡಳಿತ ಮಂಡಳಿ ಅಧ್ಯಕ್ಷ ಅಭಯಚಂದ್ರ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ‘ಮಧ್ಯಮ ವರ್ಗದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಸ್ಥಾಪನೆಯಾದ ಈ ಮಹಾವೀರ ಕಾಲೇಜು ಉತ್ತಮ ಸಾಧನೆ ಮಾಡುತ್ತಿದೆ. ಸ್ಥಾಪಕರಾದ ಟಿ.ಎಂ.ಎ. ಪೈ ಹಾಗೂ ಎಸ್.ಎನ್. ಮೂಡುಬಿದಿರೆ ಅವರ ಕೊಡುಗೆ ಅಪಾರ ಎಂಬುದರ ಜೊತೆಗೆ ಕಾಲೇಜಿನ ಏಳಿಗಾಗಿ ದುಡಿದ ಎಲ್ಲಾ ವಿಶ್ವಸ್ಥ ಮಂಡಳಿಯ ಸದಸ್ಯರು, ಅಧ್ಯಾಪಕ ಹಾಗೂ ಅಧ್ಯಾಪಕೇತರ ವರ್ಗದವರನ್ನು ಅಭಿನಂದಿಸಿದರು.

ಸೇವೆಯಿಂದ ನಿವೃತ್ತರಾದ ಕಾಲೆಜಿನ ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ಪ್ರವೀಣ್ ಕೆ., ಮಂಗಳೂರು ವಿ.ವಿ. ಕನ್ನಡ ಅಧ್ಯಾಪಕ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕನ್ನಡ ವಿಭಾಗ ಮುಖ್ಯಸ್ಥ ಡಾ. ಚಿನ್ನಸ್ವಾಮಿ, ಮಂಗಳೂರು ವಿವಿಯ ಬಿಸಿಎ ಅಂತಿಮ ಪದವಿ ಪರೀಕ್ಷೆಯಲ್ಲಿ 9ನೇ ರ‍್ಯಾಂಕ್ ಪಡೆದ ವಿದ್ಯಾರ್ಥಿ ಶ್ರೀರಾಂ, ಬಿ.ಎಸ್ಸಿ. ಆರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ 650ರಲ್ಲಿ 649 ಅಂಕ ಗಳಿಸಿದ ವಿದ್ಯಾರ್ಥಿ ಹೆನ್ವಿಲ್ ಇವರೆಲ್ಲರನ್ನು ಸಭೆಯಲ್ಲಿ ಸನ್ಮಾನಿಸಲಾಯಿತು.

ಆಡಳಿತ ಮಂಡಳಿ ಉಪಾಧ್ಯಕ್ಷ ಸಂಪತ್ ಸಾಮ್ರಾಜ್ಯ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್ ರೆಹಮಾನ್, ವಿದ್ಯಾರ್ಥಿ ಸಂಘದ ನಾಯಕಿ ಶೃತಿ ಎಸ್. ಪೆರಿ, ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಪದವಿ ಪೂರ್ವ ಪ್ರಾಂಶುಪಾಲ ಪ್ರೊ. ರಮೇಶ್ ಭಟ್ ಸ್ವಾಗತಿಸಿದರು. ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಕಾಲೇಜಿನ ವರದಿ ಮಂಡಿಸಿದರು. ವಿದ್ಯಾರ್ಥಿಕ್ಷೇಮ ಪಾಲನಾಧಿಕಾರಿ ಪ್ರೊ. ಹರೀಶ್ ಇವರು ಸಂಸ್ಥಾಪಕರ ಸ್ಮರಣೆ ಮಾಡಿದರು.  ಕನ್ನಡ ವಿಭಾಗ ಮುಖ್ಯಸ್ಥ ಡಾ. ಚಿನ್ನಸ್ವಾಮಿ ವಂದಿಸಿದರು. ಭೌತಶಾಸ್ತ್ರ ಉಪನ್ಯಾಸಕಿ ಚೈತ್ರ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article