
ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆ ಮೃತ್ಯು
Wednesday, May 28, 2025
ಮೂಡುಬಿದಿರೆ: ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾ.ಪಂ. ವ್ಯಾಪ್ತಿಯ ಹೊಸಮಾರಪದವಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಲಿಲ್ಲಿ ಡಿಸೋಜ (53) ಎಂದು ಗುರುತಿಸಲಾಗಿದೆ.
ಮನೆಯ ಮೇಲೆ ವಿದ್ಯುತ್ ತಂತಿ ಹರಿದುಹೋಗಿದ್ದು, ಮರದ ಕೊಂಬೆ ವಿದ್ಯುತ್ ಲೈನ್ ಮೇಲೆ ಬಿದ್ದಿದ್ದು, ವಿದ್ಯುತ್ ತಂತಿ ಕೆಳಗೆ ಬಿದ್ದ ಕಾರಣ ಸಾವು ಸಂಭವಿಸಿದೆ.
ಈ ಹಿಂದೆ ನಡೆದ ಶಾಸಕರು ಮತ್ತು ತಾಹಶೀಲ್ದಾರ್ ಅವರು ಮಳೆಗೆ ಮೊದಲು ಮರದ ಕೊಂಬೆಗಳನ್ನು ಕಡಿಯುವಂತೆ ಸೂಚಿಸಿದ್ದರೂ, ಮೆಸ್ಕಾಂ ನಿರ್ಲಕ್ಷ್ಯ ವಹಿಸಿದ್ದು, ಈ ನಿರ್ಲಾಕ್ಷ್ಯವೇ ಈ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಈ ಸಂಬಂಧ ಮೆಸ್ಕಾಂ ವಿರುದ್ಧ ಗ್ರಾಮಸ್ಥರು ಪ್ರತಿಭಟನೆಗೆ ಸಿದ್ದತೆ ನಡೆಸುತ್ತಿದ್ದಾರೆ.