ಮಳೆ-ಗಾಳಿ: ಕಡಂದಲೆಯಲ್ಲಿ ಮನೆಯ ಮೇಲೆ ಬಿದ್ದ ಮರ

ಮಳೆ-ಗಾಳಿ: ಕಡಂದಲೆಯಲ್ಲಿ ಮನೆಯ ಮೇಲೆ ಬಿದ್ದ ಮರ


ಮೂಡುಬಿದಿರೆ: ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯಲ್ಲಿ ಶುಕ್ರವಾರ ಸುರಿದ ಭಾರೀ ಮಳೆ, ಬೀಸಿದ ಗಾಳಿಗೆ ಕಡಂದಲೆ ಬಿಟಿ ರೋಡ್ ನಲ್ಲಿ ಯಶೋದಾ ಪಾಂಡು ಗೌಡ ಅವರ ಮನೆ ಮೇಲೆ  ಸಂಜೆ 6 ಗಂಟೆ ಸುಮಾರಿಗೆ ಭಾರೀ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ತೀವ್ರ ಹಾನಿ ಯುಂಟಾಗಿದೆ.


ಯಾವುದೇ ಜೀವಾಪಾಯವಾಗಿಲ್ಲ. ಸ್ಥಳೀಯರು ಕೂಡಲೇ ಧಾವಿಸಿ ಮನೆಗೆ ಬಿದ್ದ ಮರವನ್ನು ತೆರವು ಮಾಡಲು ಸಹಕರಿಸಿದರು. 

ಗ್ರಾ.ಪಂ. ಪಿಡಿಓ ರಕ್ಷಿತಾ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ಮಾಡಲಾಯಿತು. ಗ್ರಾಮ ಸಹಾಯಕ ರೀತೇಶ್, ಗ್ರಾಮ ಪಂಚಾಯತ್ ಸದಸ್ಯರಾದ ಜಗದೀಶ್ ತೊoದಾಡ್ಪು ಮೊದಲಾದವರು ಸಹಕರಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article