ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ: ಪಲ್ಲಕಿ ಉತ್ಸವ, ಚಂಡಿಕಾ ಯಾಗ

ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ: ಪಲ್ಲಕಿ ಉತ್ಸವ, ಚಂಡಿಕಾ ಯಾಗ


ಮೂಡುಬಿದಿರೆ: ಕೋಟೆಬಾಗಿಲು ಶ್ರೀ ವೀರಮಾರುತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಗುರುವಾರ ನಡೆಯಿತು.

ಬೆಳಗ್ಗೆ ನಾಗದೇವರಿಗೆ ಪಂಚಾಮೃತ ಅಭಿಷೇಕ, ಗಣಪತಿ ದೇವರಿಗೆ ಗಣಹೋಮ, ನವಕ ಕಲಶಾಭಿಷೇಕ, ವಾಯುಸ್ತುತಿ ಪುನಶ್ಚರಣ ಹೋಮ ನಡೆಯಿತು.


ಬಳಿಕ ಎಡಪದವು ಮುರಳೀಧರ ತಂತ್ರಿಗಳ ನೇತ್ರತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಚಂಡಿಕಾಯಾಗ, ದೇವಳದ ಪ್ರಧಾನ ಅರ್ಚಕ ಶಿವಪ್ರಸಾದ್ ಭಟ್ ಅವರ ಪೌರೋಹಿತ್ಯದಲ್ಲಿ ಮಹಾಪೂಜೆ ನಂತರ ಪಲ್ಲಕಿ ಉತ್ಸವ ನಡೆಯಿತು. 

ಅಪರಾಹ್ನ ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ ಭಜನಾ ಕಾರ್ಯಕ್ರಮ ಜರಗಿತು. ರಾತ್ರಿ ವಿಶೇಷ ರಂಗಪೂಜೆ, ಪಲ್ಲಕಿ ಉತ್ಸವ, ಕೋಟೆಸವಾರಿ ನಡೆಯಿತು. ಬಳಿಕ ಪ್ರಸಾದ ವಿತರಿಸಲಾಯಿತು. ರಾತ್ರಿ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಪಾವಂಜೆ ಮೇಳದವರಿಂದ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ ಪ್ರದರ್ಶನಗೊಂಡಿತು. 

ದೇವಸ್ಥಾನದ ಆಡಳಿತ ಮೊಕ್ತೇಸರ ಉದಯ ಕುಮಾರ್ ಹೆಗ್ಡೆ, ಕಾರ್ಯದರ್ಶಿ ಶಂಕರ್ ಹೆಗ್ಡೆ, ಮಾಜಿ ಆಡಳಿತ ಮೊಕ್ತೇಸರರುಗಳಾದ ದೇವೇಂದ್ರ ಹೆಗ್ಡೆ, ಶ್ಯಾಮ ಹೆಗ್ಡೆ, ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘದ ಅಧ್ಯಕ್ಷ ನವೀನ್ ಹೆಗ್ಡೆ, ಕಾರ್ಯದರ್ಶಿ ವೈಷ್ಣವ ಹೆಗ್ಡೆ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ಹೆಗ್ಡೆ, ಕಾರ್ಯದರ್ಶಿ ಲತಾ ಯು. ಹೆಗ್ಡೆ, ಮೂಡುಬಿದಿರೆ ವಲಯ ಅಧ್ಯಕ್ಷೆ ಉಷಾ ಕೆ. ಹೆಗ್ಡೆ, ಕಾರ್ಯದರ್ಶಿ ಮಮತ ಆರ್. ಹೆಗ್ಡೆ,  ಮುಂಬಯಿ ಹೆಗ್ಗಡೆ ಸಂಘದ ಅಧ್ಯಕ್ಷ ಮನೋಜ್ ಹೆಗ್ಡೆ, ಬೆಂಗಳೂರು ಹೆಗ್ಗಡೆ ಸಂಘದ ಅಧ್ಯಕ್ಷ ಪ್ರಕಾಶ್ ಹೆಗ್ಡೆ ಹಾಗೂ ವಿವಿಧ ವಲಯಗಳ ಅಧ್ಯಕ್ಷರು ಮತ್ತು ಸಮಾಜ ಬಾಂಧವರು ಪಾಲ್ಗೊಂಡರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article