ಪಹಲ್ಗಾವ್ ಪ್ರತಿಕಾರ ‘ಆಪರೇಷನ್ ಸಿಂಧೂರ್’ ಮೂಲಕ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ

ಪಹಲ್ಗಾವ್ ಪ್ರತಿಕಾರ ‘ಆಪರೇಷನ್ ಸಿಂಧೂರ್’ ಮೂಲಕ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ


ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ ಗಡಿಭಾಗದಲ್ಲಿ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ನಾಗರಿಕರನ್ನು ಭಯೋತ್ಪಾದಕರು ಕೊಂದಿದ್ದರು. ಇದಕ್ಕೆ ಪ್ರತಿಕಾರವಾಗಿ ಈ ಕಾರ್ಯಾಚರಣೆ ನಡೆಯುತ್ತಿದ್ದು, ಭಾರತ ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿದ್ದ 9 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ 5 ಭಯೋತ್ಪಾದಕ ಶಿಬಿರಗಳನ್ನು  ಹಾಗೂ ಪಾಕಿಸ್ತಾನದಲ್ಲಿದ್ದ 4 ಭಯೋತ್ಪಾದಕ ನೆಲೆಗಳನ್ನು ನಾಶಪಡಿಸುವಲ್ಲಿ ಭಾರತದ ಸೇನೆಯ ಜಂಟಿ ಕಾರ್ಯಾಚರಣೆ ಯಶಸ್ವಿಯಾಗಿದೆ.
ಪಾಕಿಸ್ತಾನದ 9 ಪ್ರದೇಶದಲ್ಲಿರುವ ಉಗ್ರರ ತಾಣಗಳ ಮೇಲೆ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಭಾರತದ ರಕ್ಷಣಾ ಸಚಿವಾಲಯ ಈ ಕುರಿತು ವಿವರಣೆ ನೀಡಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article