ಫಿಲೋಮಿನಾ ಪ.ಪೂ. ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಪ್ರಥಮ ಕಾರ್ಯಕಾರಿ ಸಮಿತಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಫಿಲೋಮಿನಾ ಪ.ಪೂ. ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಪ್ರಥಮ ಕಾರ್ಯಕಾರಿ ಸಮಿತಿ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ


ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ನೂತನವಾಗಿ ರಚಿತವಾದ ಹಿರಿಯ ವಿದ್ಯಾರ್ಥಿ ಸ೦ಘದ ಪ್ರಥಮ ಕಾರ್ಯಕಾರಿ ಸಮಿತಿ ಸಭೆ ಮೇ 9ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಹಿರಿಯ ವಿದ್ಯಾರ್ಥಿ ಸ೦ಘದ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. 

ನೂತನ ಅಧ್ಯಕ್ಷರಾಗಿ ಡಾ. ಪ್ರಕಾಶ್ ಬಿ, ಉಪಾಧ್ಯಕ್ಷರುಗಳಾಗಿ ನಿವೃತ ಪ್ರಾಧ್ಯಾಪಕರಾದ ಪ್ರೊ. ಪೌಲ್ ಹೆರಾಲ್ಡ್ ಮಸ್ಕರೆನ್ಹಸ್ ಹಾಗೂ ದಿವ್ಯಾ ಕೆ, ಕಾರ್ಯದರ್ಶಿಯಾಗಿ ರಾಜ್ಯಶಾಸ್ತ್ರ ಉಪನ್ಯಾಸಕ ಭರತ್ ಕುಮಾರ್ ಎ., ಖಜಾಂಜಿಯಾಗಿ ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಫಿಲೋಮಿನಾ ಮೊಂತೆರೊ ಆಯ್ಕೆಯಾದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ಮಾತನಾಡಿ, ಹಿಂದಿನ ಶ್ಯೆಕ್ಷಣಿಕ ವರ್ಷದಲ್ಲಿ ಆಯೋಜಿಸಿದ ‘ಪಿಲೋ-ಮಿಲನ’ ಕಾರ್ಯಕ್ರಮದ ಕುರಿತಾಗಿ, ಈ ಶ್ಯೆಕ್ಶಣಿಕ ವರುಷದ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆ ಬಗ್ಗೆ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಮಾಹಿತಿಯನ್ನು ನೀಡಿದರು.

ಮುಂದಿನ ಶೈಕ್ಷಣಿಕ ವರುಷದ ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯಸೂಚಿಯ ಬಗ್ಗೆ ಚರ್ಚಿಸಲಾಯಿತು. ಕಾಲೇಜಿನಲ್ಲಿ ನಡೆಯುವ ಶ್ಯೆಕ್ಶಣಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ಹಿರಿಯ ವಿದ್ಯಾರ್ಥಿ ಸಂಘದ ಸಂಪೂರ್ಣ ಸಹಕಾರ ನೀಡುವುದಾಗಿ ಸಭೆಯಲ್ಲಿ ಉಪಸ್ಥಿತರಿದ್ದ ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ನೂತನ ಪದಾಧಿಕಾರಿಗಳು ಭರವಸೆ ನೀಡಿದರು.

ಕಾರ್ಯದರ್ಶಿಗಳಾದ ಭರತ್ ಕುಮಾರ್ ಎ. ಕಾರ್ಯಕ್ರಮವನ್ನು ನಿರ್ವಹಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article