ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಖಾಸಗಿ ಉದ್ಯೋಗ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಖಾಸಗಿ ಉದ್ಯೋಗ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರ


ಪುತ್ತೂರು: ಸಂತ ಫಿಲೋಮೀನಾ ಕಾಲೇಜು (ಸ್ವಾಯತ್ತ) ಪುತ್ತೂರು ಹಾಗೂ ವಿದ್ಯಾಮಾತ ಫೌಂಡೇಶನ್ ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಖಾಸಗಿ ಉದ್ಯೋಗ ಅವಕಾಶಗಳ ಕುರಿತ ಮಾಹಿತಿ ಕಾರ್ಯಾಗಾರ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಉಪಪ್ರಾಂಶುಪಾಲರಾದ ವಿಜಯ ಕುಮಾರ್ ಮೊಳೆಯಾರ್ ಮಾತನಾಡಿ, ಇಂದಿನ ಯುವ ಪೀಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಕಡೆನೆ ಹೆಚ್ಚಿನ ಪ್ರಾಶಸ್ತ್ಯ ಕೊಟ್ಟು ಶ್ರಮ ವಹಿಸಿ ಅಧ್ಯಯನ ನಡೆಸಿದರೆ ಸರಕಾರಿ ಹುದ್ಧೆಗಳನ್ನು ಪಡೆಯುವಲ್ಲಿ ಯಶಸ್ಸು ಸಾಧ್ಯ ಎಂದು ಹೇಳಿದರು.


ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ವಿದ್ಯಾಮಾತಾ ಸಂಸ್ಥೆಯ ಸ್ಥಾಪಕ ಭಾಗ್ಯೇಶ್ ರೈ ವಿವಿಧ ಸರಕಾರಿ ಮತ್ತು ಖಾಸಗಿ ಉದ್ಯೋಗಾವಕಾಶಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ಮೂಲಕ ತರಬೇತಿಯನ್ನು ನೀಡಿದರು. 

ಕಾರ್ಯಕ್ರಮದಲ್ಲಿ ವಿವಿಧ ಸ್ನಾತಕೊತ್ತರ ವಿಭಾಗದ ಉಪಾನ್ಯಾಸಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಕಾರ್ಯಕ್ರಮವನ್ನು ಶರಣ್ಯ ಸ್ವಾಗತಿಸಿ, ಪ್ರಣಮ್ಯ ಪ್ರಾರ್ಥಿಸಿ, ನೇಹಾ ವಂದಿಸಿ ಹಾಗೂ ಸ್ನೇಹ ಜೇಕಬ್ ರೋಸ್ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article