
ರಸ್ತೆ ಬದಿಗೆ ಸಿಲುಕಿದ ಬಸ್
Sunday, May 25, 2025
ಸುಬ್ರಹ್ಮಣ್ಯ: ದಾವಣಗೆರೆಯಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಬಿದ್ದು ಸಿಲುಕಿಕೊಂಡ ಘಟನೆ ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಚೇರು ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ.
ನಿರಂತರ ಮಳೆ ಬರುತ್ತಿರುವುದರಿಂದ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಸರಿದು ನಿಂತಿದ್ದು, ಘಟನೆಯಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು. ಬಳಿಕ ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ.