
ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ನಿಧನ
Monday, May 12, 2025
ಉಡುಪಿ: ಕನ್ನಡದ ಕಿರುತೆರೆ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಲ್ಪೆ ರಾಕೇಶ್ ಪೂಜಾರಿ(33) ಕುಸಿದು ಬಿದ್ದು ಮೃತ ಪಟ್ಟಿದ್ದಾರೆ.
ಅವರು ಕಳೆದ ರಾತ್ರಿ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದರೆನ್ನಲಾಗಿದೆ. ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಸಾಗಿಸಲಾಯಿತು ಆದರೆ ಪರೀಕ್ಷಿಸಿದ ವೈದ್ಯರು ರಾಕೇಶ್ ಪೂಜಾರಿ ಅದಾಗಲೇ ಮೃಪಟ್ಟಿರುವುದಾಗಿ ತಿಳಿಸಿದ್ದಾರೆ.
ರಿಷಭ್ ಶೆಟ್ಟಿ ಅವರ ಕಾಂತಾರ ಫ್ರೀಕ್ವೆಲ್ ಸಿನಿಮಾದಲ್ಲಿ ಮುಖ್ಯ ಪಾತ್ರದಲ್ಲಿ ನಟನೆ ಮಾಡಿದ್ದರು. 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ಗೆ ಅವರು ಆಯ್ಕೆ ಆದರು ಮತ್ತು ರನ್ನರ್ ಅಪ್ ತಂಡದಲ್ಲಿ ಅವರು ಇದ್ದರು. ನಂತರದ ಸೀಸನ್ನಲ್ಲಿ ಅವರು ವಿನ್ನರ್ ಆದರು. ಕನ್ನಡದ ‘ಪೈಲ್ವಾನ್’, ‘ಇದು ಎಂಥಾ ಲೋಕವಯ್ಯ’ ಚಿತ್ರಗಳಲ್ಲಿ ನಟಿಸಿದ್ದಾರೆ. ತುಳು ಭಾಷೆಯ ‘ಪೆಟ್ಕಮ್ಮಿ’, ‘ಅಮ್ಮೆರ್ ಪೊಲೀಸ್’ ಮೊದಲಾದ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ.