ಭಯೋತ್ಪಾದಕರ ವಿರುದ್ಧದ ಕ್ರಮಗಳಿಗೆ ಸಿಪಿಐ(ಎಂ) ಬೆಂಬಲ

ಭಯೋತ್ಪಾದಕರ ವಿರುದ್ಧದ ಕ್ರಮಗಳಿಗೆ ಸಿಪಿಐ(ಎಂ) ಬೆಂಬಲ

ಉಡುಪಿ: ಪಿಒಕೆ (ಪಾಕಿಸ್ತಾನ-ಆಕ್ರಮಿತ ಕಾಶ್ಮೀರ) ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳು ಮತ್ತು ಮೂಲಸೌಕರ್ಯಗಳನ್ನು ನಾಶಮಾಡುವ ಉದ್ದೇಶದಿಂದ ಭಾರತೀಯ ಸಶಸ್ತ್ರ ಪಡೆಗಳು ಆಪರೇಷನ್ ಸಿಂದೂರ್‌ನ್ನು ನಡೆಸಿರುವುದನ್ನು ಸಿಪಿಐ(ಎಂ) ಸ್ವಾಗತಿಸಿದೆ.

ಈ ಪ್ರಹಾರಗಳನ್ನು ನಿದಿಷ್ಟ ಗುರಿಗಳ ಮೇಲೆ ಅಳೆದು ಸುರಿದು ಮತ್ತು ಮುಂದೆಳೆದುಕೊಂಡು ಹೋಗದ ರೀತಿಯಲ್ಲಿ ಮಾಡಲಾಗಿದೆ ಹಾಗೂ  ಒಂಬತ್ತು ಸ್ಥಳಗಳಲ್ಲಿ ಯಶಸ್ವಿಯಾಗಿ ಅದನ್ನು ನಡೆಸಲಾಗಿದೆ. ಒಕ್ಕೂಟ ಸರ್ಕಾರ ಕರೆದ ಸರ್ವಪಕ್ಷ ಸಭೆಯಲ್ಲಿ ಭಯೋತ್ಪಾದಕರು ಮತ್ತು ಅವರ ನಿರ್ವಾಹಕರ ವಿರುದ್ಧ ಗುರಿಯಿಟ್ಟು ಒಕ್ಕೂಟ ಸರ್ಕಾರ ತೆಗೆದುಕೊಳ್ಳುವ ಕ್ರಮಗಳಿಗೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ ನೀಡಿದ್ದವು ಎಂಬುದನ್ನು ಈ ಸಂದರ್ಭದಲ್ಲಿ ಸಿಪಿಐ (ಎಂ) ಪೊಲಿಟ್‌ಬ್ಯುರೊ ಹೇಳಿದೆ ಎಂದು ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ತಿಳಿಸಿದ್ದಾರೆ.

ಈ ಕ್ರಮಗಳ ಜೊತೆಗೆ ಪಹಲ್ಗಾಮ್‌ನಲ್ಲಿ ಮುಗ್ಧ ಜನರ ಹತ್ಯಾಕಾಂಡಕ್ಕೆ ಕಾರಣರಾದವರನ್ನು ಹಸ್ತಾಂತರಿಸಲು ಮತ್ತು ತನ್ನ ಪ್ರದೇಶದಿಂದ ಯಾವುದೇ ಭಯೋತ್ಪಾದಕ ಶಿಬಿರಗಳು ಕಾರ್ಯನಿರ್ವಹಿಸದಂತೆ ನೋಡಿಕೊಳ್ಳಲು ಪಾಕಿಸ್ತಾನದ ಮೇಲೆ ಒತ್ತಡ ಹೇರುವುದನ್ನು ಮುಂದುವರಿಸಬೇಕು. ಜನರ ಐಕ್ಯತೆ ಮತ್ತು ದೇಶದ ಸಮಗ್ರತೆಯನ್ನು ರಕ್ಷಿಸಲಾಗುತ್ತಿದೆ ಎಂಬುದನ್ನು ಭಾರತ ಸರ್ಕಾರ ಖಚಿತಗೊಳಿಸಿಕೊಳ್ಳಬೇಕು ಎಂದು ಸಿಪಿಐ(ಎಂ) ಹೇಳಿದೆ.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article