
ಸಿಎಂ ವಿರುದ್ಧ ಆಕ್ಷೇಪಾರ್ಹ ಬರಹ: ನ್ಯಾಯಾಂಗ ಬಂಧನ
Monday, May 5, 2025
ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ರಾಜಕೀಯ ವೈಷಮ್ಯದಿಂದ ‘ಸಿ.ಎಂ ಸಿದ್ದರಮಯ್ಯನನ್ನು ಕೊಂದ್ರೆ ಹಿಂದುಗಳಿಗೆ ನೆಮ್ಮದಿ’ ಎಂದು ಬರೆದು ಶೇರ್ ಮಾಡಿ ರಾಜಕೀಯ ಪಕ್ಷದ ಮುಖಂಡರು ಹಾಗೂ ಹಿಂದುಗಳಿಗೆ ನೆಮ್ಮದಿ ಎಂದು ಪ್ರಚೋದಿಸಿ ವೈರತ್ವವನ್ನು ಬೆಳಸಿ ದ್ಷೇಷ ಭಾವನೆ ಹರಡುವ ಉದ್ದೇಶದಿಂದ ಸಂಪತ್ ಸಾಲ್ಯಾನ್ ಎಂಬಾತ ಬರೆದಿದ್ದು, ಆತನ ವಿರುದ್ಧ ಕಾರ್ಕಳ ನಗರ ಠಾಣೆಯಲ್ಲಿ ಸೂರಜ್ ಕುಕ್ಕುಂದೂರು ಎಂಬವರು ನೀಡಿದ ದೂರಿನಂತೆ ಕೇಸು ದಾಖಲಾಗಿದೆ.
ಆರೋಪಿ ಬೆಂಗಳೂರಿನ ಹೋಂ ಗಾರ್ಡ್ ಕಚೇರಿಯಲ್ಲಿ ಕೆಲಸ ನಿರ್ವಹಿಸಿಕೊಂಡಿರುವುದು ತನಿಖೆಯಲ್ಲಿ ಕಂಡುಬಂದಿದ್ದು, ಆತನನ್ನು ಬಂಧಿಸಿ, ನ್ಯಾಯಾಲಯದೆದುರು ಹಾಜರುಪಡಿಸಿದಾಗ ಆತನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.