
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ
ಉಜಿರೆ: ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಯೋಗ ಮತ್ತು ಅದಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಮೀಸಲಾಗಿರುವ ಬೆಂಗಳೂರಿನ ಖ್ಯಾತ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಖಾಸಗಿ ಡೀಮ್ಡ್ ವಿಶ್ವವಿದ್ಯಾನಿಲಯದ ಸಂಸ್ಥಾಪಕರು ಹಾಗೂ ಉಪಕುಲಪತಿ ಹೆಚ್.ಆರ್. ನಾಗೇಂದ್ರ ಭೇಟಿ ನೀಡಿದರು.
ಅವರು ಮಾತನಾಡಿ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯು ಮಂಜುನಾಥ ಸ್ವಾಮಿಯ ಕೃಪೆ, ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತು ಡಾ. ಹೇಮಾವತಿ ಹೆಗ್ಗಡೆ ಅವರ ಪ್ರೇರಣೆ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಅದ್ಭುತ ಸಂಸ್ಥೆ. ಕೋಟ್ಯಾಂತರ ರೂ. ಖರ್ಚು ಮಾಡಿ ಒಂದು ಗ್ರಾಮೀಣ ಭಾಗದಲ್ಲಿ ಈ ಆಸ್ಪತ್ರೆ ನಿರ್ಮಿಸಿರುವ ಉದ್ದೇಶ ಲಾಭಕ್ಕಲ್ಲ ಅನ್ನುವುದು ಗೊತ್ತಾಗುತ್ತದೆ. ಇಲ್ಲಿನ ವೈದ್ಯಕೀಯ ಸೇವೆ ಅಮೋಘವಾದದ್ದು. ಡಯಾಲಿಸಿಸ್ ವಿಭಾಗದಲ್ಲಿ ನೀಡುತ್ತಿರುವ ಉಚಿತ ಡಯಾಲಿಸಿಸ್ ಸೇವೆ ಹಾಗೂ ಅಲ್ಲಿ ಅಳವಡಿಸಿರುವ ವ್ಯವಸ್ಥೆಯು ಅತ್ಯುತ್ತಮವಾಗಿದೆ ಎಂದರು.
ವೈದ್ಯರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿ, ಯೋಗ, ಪ್ರಾಣಾಯಾಮ ಮತ್ತು ಜೀವನಶೈಲಿಯ ಬದಲಾವಣೆಯಿಂದ ರೋಗ ನಿವಾರಣೆ ಸಾಧ್ಯ ಎಂದರು.
ಉಜಿರೆ ಎಸ್‌ಡಿಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಫೈನಾನ್ಸ್ ಡೈರೆಕ್ಟರ್ ಡಾ. ದಯಾನಂದ, ಯೋಗ ತರಬೇತುದಾರ ಡಾ. ಅಮಿತ್, ಕ್ಷೇಮವನದ ಮುಖ್ಯ ಕ್ಷೇಮಾಧಿಕಾರಿ ಡಾ. ನರೇಂದ್ರ, ಹಾಗೂ ಶಾಂತಿವನದ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ವಿಭಾಗ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.