
ಮಂಗಳೂರು ವಿವಿ: ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ ಉದ್ಘಾಟನೆ
ಉಳ್ಳಾಲ: ಮಹಾತ್ಮ ಗಾಂಧೀಜಿಯವರು ಭಾರತೀಯ ಸಮಾಜವನ್ನು ಬಹಳ ಹತ್ತಿರದಿಂದ ಅಧ್ಯಯನ ಮಾಡಿದವರು. ಆದ್ದರಿಂದಲೇ ಸಮಾಜ ಒಳಹುಗಳನ್ನು ಸೂಕ್ಷ್ಮವಾಗಿ ಮನಗಂಡಿದ್ದರು. ಭಾರತದ ಪರಂಪರೆ ಚರಿತ್ರೆಯೊಂದಿಗೆ ಗಾಂಧೀಜಿಯವರ ಬದುಕನ್ನು ನಾವು ಅರ್ಥೈಸಿಕೊಂಡು ಮುನ್ನಡೆಯಬೇಕು ಎಂದು ಮಂಗಳೂರು ವಿವಿ ಕುಲಸಚಿವ ಪ್ರೊ. ಪಿ.ಎಲ್. ಧರ್ಮ ಹೇಳಿದರು.
ಮಂಗಳೂರು ವಿವಿ ನೆಹರೂ ಚಿಂತನ ಕೇಂದ್ರ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಇದರ ಆಶ್ರಯದಲ್ಲಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಹಿನ್ನೆಲೆಯಲ್ಲಿ ಗುರುವಾರ ಮಂಗಳೂರು ವಿವಿಯಲ್ಲಿ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದು ನಾವು ತಂತ್ರಜ್ಞಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ಅದ್ಭುತವಾದ ಸಾಧನೆಯನ್ನು ಮಾಡುತ್ತಿದ್ದರೂ ಕೆಲವೊಂದು ಸಮಸ್ಯೆಗಳು ಇನ್ನೂ ದೂರವಾಗಿಲ್ಲ. ಬಡತನ ಕಾಣುತ್ತಿಲ್ಲ ಆದರೆ ಬಡತನದ ರೂಪ ಬದಲಾಗಿದೆ. ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಜೊತೆಗೆ ಹಿಂಸೆಯನ್ನು ಪ್ರೀತಿಸುವ ಮನೋಭಾವ ಹೆಚ್ಚಾಗುತ್ತಿದೆ. ಗಾಂಧೀಜಿಯವರ ಪರಿಕಲ್ಪನೆಯಂತೆ ನಮ್ಮ ದಿನನಿತ್ಯದ ಕೆಲಸಗಳು ಧರ್ಮಯುತವಾಗಿರವೇಕು ಹಾಗೂ ಬದುಕಿನ ಮೌಲ್ಯಗಳನ್ನು ನಾವು ಅರ್ಥೈಸಿಕೊಂಡು ಮುನ್ನಡೆಯಬೇಕಿದೆ. ಮನುಷ್ಯತ್ವ, ಪ್ರೀತಿ, ವಿಶ್ವಾಸದಿಂದ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಮಂಗಳೂರು ವಿವಿ ಕುಲಸಚಿವರಾದ ಕೆ. ರಾಜು ಮೊಗವೀರ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗಾಂಧೀಜಿಯ ಮೌಲ್ಯಗಳು ನಮ್ಮೆಲ್ಲರಲ್ಲೂ ಇವೆ. ಆದರೆ ಅವು ಎಷ್ಟು ಜಾಗ್ರತವಾಗಿವೆ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕಿದೆ. ವಿದ್ಯಾರ್ಥಿಗಳಲ್ಲಿ, ಯುವ ಮನಸ್ಸುಗಳಲ್ಲಿ ಗಾಂಧೀಜಿಯವರ ಜೀವನ ಮೌಲ್ಯಗಳನ್ನು ತಿಳಿಯ ಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕ್ವಿಝ್ ಮಾಸ್ಟರ್ ಎಂ. ಧನಶೇಖರ್, ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರಾದ ಡಾ. ದೇವೇಂದ್ರಪ್ಪ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕರಾದ ಪ್ರೊ. ಪ್ರಶಾಂತ್ ನಾಯ್ಕ್ ಅವರು ಸ್ವಾಗತಿಸಿ, ವಿದ್ಯಾರ್ಥಿನಿ ಶ್ರೀ ರಕ್ಷಾ ಕಾರ್ಯಕ್ರಮ ನಿರೂಪಿಸಿದರು.