68 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಡೇಶ್ವಾಲ್ಯ: ಗ್ರಾ.ಪಂ. ಕಚೇರಿ ಹಾಗೂ ಸಭಾಂಗಣದ ಲೋಕಾರ್ಪಣೆ

68 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಕಡೇಶ್ವಾಲ್ಯ: ಗ್ರಾ.ಪಂ. ಕಚೇರಿ ಹಾಗೂ ಸಭಾಂಗಣದ ಲೋಕಾರ್ಪಣೆ


ಬಂಟ್ಚಾಳ: ಕಡೇಶ್ವಾಲ್ಯದಲ್ಲಿ ಸುಮಾರು 68 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಂಡ ಗ್ರಾ.ಪಂ. ಕಚೇರಿ ಹಾಗೂ ಸಭಾಂಗಣ ಕಟ್ಟಡ ಪ್ರಗತಿ ಸೌಧವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ ಉಳಿಪ್ಪಾಡಿ ಅವರು ಲೋಕಾರ್ಪಣೆಗೊಳಿಸಿದರು.

ಗ್ರಾ.ಪಂ. ಸದಸ್ಯರೆಲ್ಲರೂ ಒಗ್ಗಟ್ಟಾಗಿ ಆಡಳಿತ ನೀಡಿದಾಗ ಇಂತಹ ಸುಂದರ ಕಟ್ಟಡಗಳು ನಿರ್ಮಾಣಗೊಳ್ಳುವುದಕ್ಕೆ ಸಾಧ್ಯವಿದ್ದು, ಜತೆಗೆ ಗ್ರಾಮದ ಅಭಿವೃದ್ಧಿಗೂ ಸಹಕಾರಿಯಾಗುತ್ತದೆ. ಕಚೇರಿಯಂತೆ ಪಂಚಾಯತ್‌ನ ಸೇವೆಗಳು ಕೂಡ ಸುಂದರವಾಗಿರಬೇಕು ಎಂದರು.

ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭೇಟಿ ನೀಡಿ ಶುಭಹಾರೈಸಿದರು. ಬಂಟ್ವಾಳ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಗ್ರಾ.ಪಂ. ಅಧ್ಯಕ್ಷೆ ಭಾರತಿ ಎಸ್. ರಾವ್, ಉಪಾಧ್ಯಕ್ಷ ಸುರೇಶ್ ಪೂಜಾರಿ ಕೆ., ತಾ.ಪಂ. ಕಾರ್ಯನಿರ್ವಹಣಾಕಾರಿ ಸಚಿನ್ ಕುಮಾರ್, ಸಹಾಯಕ ನಿರ್ದೇಶಕ ವಿಶ್ವನಾಥ್, ನರೇಗಾ ಎಂಜಿನಿಯರ್ ಆತೀಶ್, ಪಂಚಾಯತ್‌ರಾಜ್ ಕಿರಿಯ ಎಂಜಿನಿಯರ್ ನಾಗೇಶ್, ಜಿ.ಪಂ. ಮಾಜಿ ಸದಸ್ಯೆ ಕಮಲಾಕ್ಷಿ ಕೆ. ಪೂಜಾರಿ, ಗ್ರಾ.ಪಂ. ಸದಸ್ಯರು ಮೊದಲಾದವರಿದ್ದರು. 

ಪಿಡಿಒ ಸುನೀಲ್ ಕುಮಾರ್ ಸ್ವಾಗತಿಸಿ, ಮಾಜಿ ಅಧ್ಯಕ್ಷ ಸುರೇಶ್ ಬನಾರಿ ವಂದಿಸಿದರು. ಮಲ್ಲಿಕಾ ಕಡೇಶ್ವಾಲ್ಯ ಕಾರ್ಯಕ್ರಮ ನಿರೂಪಿಸಿದರು.

Ads on article

WhatsApp Image 2024-08-04 at 6.27.41 PM (1)

Advertise in articles 1

advertising articles 2

Advertise under the article